Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:28 - ಕನ್ನಡ ಸತ್ಯವೇದವು C.L. Bible (BSI)

28 ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಜೀವದ ಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನನ್ನಾಗಮಾಡುವಿ’ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಜೀವಮಾರ್ಗಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗಮಾಡುವಿ ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಶೆ ಜಿವನ್ ಕರುಚೆ ಮನುನ್ ತಿಯಾ ಮಾಕಾ ದಾಕ್ವುನ್ ದಿಲೆ, ಅನಿ ತಿಯಾ ಮಾಜ್ಯಾ ಇದ್ರಾಕ್ ರ್‍ಹಾತಲೆ ಮಾಕಾ ಉಮ್ಮೆದಿನ್ ಭರಿ ಸಾರ್ಕೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:28
14 ತಿಳಿವುಗಳ ಹೋಲಿಕೆ  

ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II


ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II


ಅವಳ ಬಳಿಗೆ ಹೋಗುವವರು ಹಿಂದಿರುಗುವುದಿಲ್ಲ, ಅವರಿಗೆ ಜೀವಮಾರ್ಗ ಪುನಃ ದೊರಕುವುದಿಲ್ಲ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.


“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು