Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:33 - ಕನ್ನಡ ಸತ್ಯವೇದವು C.L. Bible (BSI)

33 ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜೆಜು ಸರ್ಗಾರ್ ಜಾವ್ನ್ ದೆವಾಚ್ಯಾ ಉಜ್ವ್ಯಾ ಭಾಜುಕ್ ಬಸ್ಲ್ಯಾ, ಅನಿ ತೆಚ್ಯಾ ಬಾಬಾನ್ ಗೊಸ್ಟ್ ದಿಲ್ಲ್ಯಾ ಸಾರ್ಕೆ ಪವಿತ್ರ್ ಆತ್ಮೊ ತೆಕಾ ದಿಲ್ಯಾನ್, ತಸೆ ಹೊವ್ನ್ ಜೆಜುನ್ ತೊ ಆತ್ಮೊ ಅಮ್ಚ್ಯಾ ವರ್‍ತಿ ಘಾಟ್ಲಾ, ತುಮಿ ತೆ ಬಗುಕ್ ಲಾಗ್ಲ್ಯಾಸಿ ಅನಿ ಆಯ್ಕುಕ್ ಲಾಗ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:33
32 ತಿಳಿವುಗಳ ಹೋಲಿಕೆ  

ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.


ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.


ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.


ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.


ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.


ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,


ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.


ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.


ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II


ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II


ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.


ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”


ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.


ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.


ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.


ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.


ವಿಜಯಸಾಧನ ಪ್ರಭುವಿನಾ ಬಲಗೈಯಿಂದ I ಪರಾಕ್ರಮ, ಪ್ರದರ್ಶನವೂ ಅದರಿಂದ” II


ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.


ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು