Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:46 - ಕನ್ನಡ ಸತ್ಯವೇದವು C.L. Bible (BSI)

46 ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಸದ್ದಿಚ್ ತೆನಿ ಜಮಾ ಹೊವ್ನ್ ದೆವಾಚ್ಯಾ ಗುಡಿತ್ ಎಕ್ವಟ್ಟಾನಿ ಯೆಯ್ತ್ ಅನಿ ಅಪ್ಲ್ಯಾ ಘರಾತ್ನಿ ಎಕುಚ್ ಕಡೆ ಮಿಳುನ್ ಜೆವಾನ್ ಕರಿತ್, ಕುಶಿನ್ ಅನಿ ಖಾಲ್ತಿ ಹೊವ್ನ್ ಚಲ್ತಲ್ಯಾ ಮನಾನಿ ಜೆವಾನ್ ಕರಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:46
25 ತಿಳಿವುಗಳ ಹೋಲಿಕೆ  

ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.


ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.


ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.


ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ಮಹಾದೇವಾಲಯದಲ್ಲಿ ದೇವರನ್ನು ಸತತವಾಗಿ ಸ್ತುತಿಮಾಡಿಕೊಂಡಿದ್ದರು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.


ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.


ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.


“ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.


ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು