Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:6 - ಕನ್ನಡ ಸತ್ಯವೇದವು C.L. Bible (BSI)

6 ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಸಪ್ಪಳವಾದಾಗ ಆ ಜನರೆಲ್ಲರೂ ಗುಂಪು ಗುಂಪಾಗಿ ಕೂಡಿಬಂದು ಪ್ರತಿಯೊಬ್ಬರೂ ತಮ್ಮತಮ್ಮ ಭಾಷೆಯಲ್ಲೇ ಇವರು ಮಾತನಾಡುವುದನ್ನು ಕೇಳಿ ದಿಗ್ಭ್ರಮೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆ ಸಪ್ಪಳವಾದಾಗ ಜನರು ಗುಂಪುಗುಂಪಾಗಿ ಕೂಡಿಬಂದು ಪ್ರತಿಯೊಬ್ಬರು ತಮ್ಮ ತಮ್ಮ ಭಾಷೆಯಲ್ಲೇ ಇವರು ಮಾತಾಡುವದನ್ನು ಕೇಳಿ ಭ್ರಮೆಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೊ ಆವಾಜ್ ಆಯ್ಕುನ್ ಥೈ ದುಸ್ರ್ಯಾ ದುಸ್ರ್ಯಾ ಭಾಶೆಚಿ ಲೊಕಾ ಗೊಳಾ ಹೊಲಿ, ಕಶ್ಯಾಕ್ ಮಟ್ಲ್ಯಾರ್ ತಿ ದೆವಾಚಿ ಲೊಕಾ ಅಪ್ಲ್ಯಾ ಅಪ್ಲ್ಯಾ ಸ್ವತಾಚ್ಯಾ ಭಾಶ್ಯಾನಿ ಬೊಲುಕ್ ಲಾಗಲ್ಲೆ ತೆ ಬಗುನ್ ಥೈ ಗೊಳಾ ಹೊಲ್ಲಿ ಲೊಕಾ ಆಜಾಪ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:6
6 ತಿಳಿವುಗಳ ಹೋಲಿಕೆ  

ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.


ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.


‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.


ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು