ಅಪೊಸ್ತಲರ ಕೃತ್ಯಗಳು 20:1 - ಕನ್ನಡ ಸತ್ಯವೇದವು C.L. Bible (BSI)1 ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ದಾಂದಲ್ ಇಬೆ ಹೊತ್ತ್ಯಾ ಮಾನಾ, ಪಾವ್ಲುನ್ ವಿಶ್ವಾಸಿ ಲೊಕಾಕ್ನಿ ಗೊಳಾ ಕರುನ್ ತೆಂಕಾ ಧೈರ್ಯಾಚಿ ಗೊಸ್ಟಿಯಾ ಸಾಂಗುನ್, ಅನಿ ಜಾವ್ನ್ ಯೆತಾ ಮನುನ್ ಮೆಸೆದೊನಿಯಾಕ್ ಗೆಲೊ. ಅಧ್ಯಾಯವನ್ನು ನೋಡಿ |