Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:20 - ಕನ್ನಡ ಸತ್ಯವೇದವು C.L. Bible (BSI)

20 ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವುದಕ್ಕೂ, ಸಭೆಯಲ್ಲಿಯೂ, ಮನೆಮನೆಯಲ್ಲಿಯೂ, ಉಪದೇಶಿಸುವದಕ್ಕೂ ಹಿಂತೆಗೆಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಮಿಯಾ ತುಮ್ಚ್ಯಾ ಲೊಕಾಂಚ್ಯಾ ಇದ್ರಾಕ್ ತುಮ್ಚ್ಯಾ ಘರಾಕ್ನಿ ಯೆವ್ನ್ ತುಮ್ಕಾ ಮಜ್ಜತ್‍ಕಾರಿ ಹೊವ್ನ್ ಹೊತ್ತೊ, ಅನಿ ತುಮ್ಕಾ ಶಿಕಾಪಾಕರುಕ್ ಫಾಟಿ ಸರ್ಕುಕ್ನಾ ಹೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:20
18 ತಿಳಿವುಗಳ ಹೋಲಿಕೆ  

ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?


ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ.


ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.


ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.


ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ಇದನ್ನು ಕೇಳಿ ಪ್ರವಾದಿ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದ್ದೇನೆ. ಇಗೋ, ನಿಮ್ಮ ಕೋರಿಕೆಯ ಪ್ರಕಾರ ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸುವೆನು. ಸರ್ವೇಶ್ವರ ಯಾವ ಉತ್ತರವನ್ನು ದಯಪಾಲಿಸುವರೋ ಅದರಲ್ಲಿ ಒಂದನ್ನೂ ಮುಚ್ಚುಮರೆಮಾಡದೆ ನಿಮಗೆ ತಿಳಿಸುವೆನು.” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು