Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:21 - ಕನ್ನಡ ಸತ್ಯವೇದವು C.L. Bible (BSI)

21 ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಮಿಯಾ ಜುದೆವಾಕ್ನಿ ಅನಿ ಗ್ರಿಕಾಂಚ್ಯಾ ಲೊಕಾಕ್ನಿ ತೆನಿ ಪಾಪ್ ಸೊಡುನ್ ದೆವಾಕ್ಡೆ ಪರ್ತುನ್ ಯೆವ್ಚೆ, ಅನಿ ಧನಿಯಾ ಜೆಜುಚ್ಯಾ ವರ್‍ತಿ ವಿಶ್ವಾಸ್ ಥವ್ಚೆ ಮನುನ್ ಸಾಂಗ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:21
51 ತಿಳಿವುಗಳ ಹೋಲಿಕೆ  

ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.


ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.


ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;


“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.


ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?


ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.


ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.


ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.


ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ಶಿಷ್ಯರು ಹೊರಟುಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು.


“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.


ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.


ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಜನರು ನಾಗರೀಕರೇ ಆಗಿರಲಿ, ಅನಾಗರಿಕರೇ ಆಗಿರಲಿ, ವಿದ್ಯಾವಂತರೇ ಆಗಿರಲಿ, ಅವಿದ್ಯಾವಂತರೇ ಆಗಿರಲಿ, ಅವರೆಲ್ಲರಿಗೂ ನಾನು ಕರ್ತವ್ಯಬದ್ಧನಾಗಿದ್ದೇನೆ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


“ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು.


ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”


ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.


ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.


ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.


“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.


ಕೆಲವು ದಿನಗಳ ನಂತರ ಫೆಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರುಸಿಲ್ಲಳೊಂದಿಗೆ ಬಂದು ಪೌಲನನ್ನು ತನ್ನ ಬಳಿಗೆ ಕರೆಯಿಸಿದನು. ಕ್ರಿಸ್ತಯೇಸುವನ್ನು ವಿಶ್ವಾಸಿಸುವ ಬಗ್ಗೆ ಪೌಲನಾಡಿದ ಮಾತುಗಳನ್ನು ಆಲೈಸಿದನು.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು