Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:26 - ಕನ್ನಡ ಸತ್ಯವೇದವು C.L. Bible (BSI)

26 ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದಕಾರಣ ನಾನು ಈಹೊತ್ತು ಪ್ರಮಾಣವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ದೋಷವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ತಸೆ ಹೊವ್ನ್, ಮಿಯಾ ಖರೆಚ್ ಸಾಂಗ್ತಾ ತುಮ್ಚ್ಯಾತ್ ಕೊನ್‍ತರಿಬಿ ನಾಸ್ ಹೊವ್ನ್ ಗೆಲ್ಯಾಕ್ ಮಿಯಾ ತೆಕಾ ಹೊನೆಗಾರ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:26
14 ತಿಳಿವುಗಳ ಹೋಲಿಕೆ  

ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಇದಲ್ಲದೆ ಯೇಸು ಲಾಸರನನ್ನು ಸಮಾಧಿಯಿಂದ ಹೊರಗೆ ಕರೆದು ಸಾವಿನಿಂದ ಜೀವಕ್ಕೆ ಎಬ್ಬಿಸಿದಾಗ ಅವರ ಸಂಗಡ ಇದ್ದವರು ನಡೆದ ವಿಷಯವನ್ನು ಇತರರಿಗೆ ಸಾರುತ್ತಿದ್ದರು.


ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿಮೀರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.


ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.


ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.


ತುಸುಹೊತ್ತಾದ ಮೇಲೆ ಈ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಸರ್ವೇಶ್ವರನ ಮುಂದೆ ಸದಾ ನಿರ್ದೋಷಿಗಳು.


ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.


ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು