Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:27 - ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯಾಕಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಕಶ್ಯಾಕ್ ಮಟ್ಲ್ಯಾರ್, ಎಕ್ ಬಿ ದಾಪುನ್ ಥೈ ನಸ್ತಾನಾ ದೆವಾಚೊ ಉದ್ದೆಶ್ ಕಾಯ್ ಮನ್ತಲೆ ಮಿಯಾ ತುಮ್ಕಾ ಕಳ್ವುಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:27
23 ತಿಳಿವುಗಳ ಹೋಲಿಕೆ  

ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.


ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.


ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.


ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.


“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.


ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II


“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.


ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.


ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು