Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:28 - ಕನ್ನಡ ಸತ್ಯವೇದವು C.L. Bible (BSI)

28 ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ದೇವರು ಸ್ವರಕ್ತದಿಂದ ಸಂಪಾದಿಸಿಕೊಂಡ ಸಭೆಯನ್ನು ಪರಿಪಾಲಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತುಮ್ಕಾಚ್ ತುಮಿ ತೆಚ್ಯಾ ಹುಶ್ಯಾರ್ಕಿನ್ ರಾಕುನ್ ಘೆವಾ. ಪವಿತ್ರ್ ಆತ್ಮ್ಯಾನ್ ತ್ಯಾ ದಿಸಿ ತುಮ್ಕಾ ದಿಲ್ಯಾ ಬಕ್ರಾಂಚ್ಯಾ ತಾಂಡ್ಯಾಕ್ ಉಶಾರ್ಕಿನ್ ಬಗುನ್ಗೆವಾ, ದೆವಾಚ್ಯಾ ತಾಂಡ್ಯಾಚ್ಯಾ ಬಕ್ರಿಯಾ ರಾಕ್ತಲ್ಯಾಂಚ್ಯಾ ಸಾರ್ಕೆ ರ್‍ಹಾವಾ, ತೆ ತೆನಿ ಅಪ್ಲ್ಯಾ ಸ್ವತಾಚ್ಯಾ ಲೆಕಾಚ್ಯಾ ರಗ್ತಾನ್ ಇಕಾತ್ ಘೆಟ್ಲಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:28
61 ತಿಳಿವುಗಳ ಹೋಲಿಕೆ  

ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.


ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.


ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.


ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.


ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.


ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.


ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲೀ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ.


“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.


‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.


ದೇವರಾದ ಸರ್ವೇಶ್ವರ ನನಗೆ ಇಂತೆಂದರು: “ಕೊಯ್ಗುರಿಗಳ ಮಂದೆಯನು ಕಾಯಿ.


ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು : “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?


ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.


ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II


ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.


ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ.


ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.


ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು