Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:29 - ಕನ್ನಡ ಸತ್ಯವೇದವು C.L. Bible (BSI)

29 ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಮಿಯಾ ಸೊಡುನ್ ಗೆಲ್ಲ್ಯಾ ಮಾನಾ ಕ್ರುರ್ ಝುಲ್ ಕುತ್ರಿ ತುಮ್ಚ್ಯಾಕ್ಡೆ ಯೆತಾತ್ ಅನಿ ತೆನಿ ಬಕ್ರ್ಯಾಂಚ್ಯಾ ತಾಂಡ್ಯಾಕ್ನಿ ಸೊಡಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:29
18 ತಿಳಿವುಗಳ ಹೋಲಿಕೆ  

“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.


ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.


ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.


“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ !” ಇದು ಸರ್ವೇಶ್ವರ ಸ್ವಾಮಿಯ ನುಡಿ.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?


ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.


ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.


ಹೀಗಾಗುವಾಗ ಅವರಿಗೆ ಅಲ್ಪಸ್ವಲ್ಪ ಸಹಾಯ ದೊರೆಯುವುದು. ಆ ಬಳಿಕ ಬಹುಮಂದಿ ನಯನವಿರಾದ ಮಾತುಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.


“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.


ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು