Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:3 - ಕನ್ನಡ ಸತ್ಯವೇದವು C.L. Bible (BSI)

3 ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ , ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅಲ್ಲಿ ಮೂರು ತಿಂಗಳು ಕಳೆದ ಮೇಲೆ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರಲ್ಲಿ ಒಳಸಂಚು ಹುಟ್ಟಿದ್ದರಿಂದ ಅವನು ಮಕೆದೋನ್ಯದ ಮೇಲೆ ಹಿಂತಿರುಗಿ ಹೋಗುವದಕ್ಕೆ ತೀರ್ಮಾನಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಪಾವ್ಲು ಥೈ ತಿನ್ ಮ್ಹೈನೆ ಪತರ್ ಹೊತ್ತೊ, ತೊ ಸಿರಿಯಾ ಮನ್ತಲ್ಯಾ ಶಾರಾಕ್ ಜಾವ್ಕ್ ತಯಾರ್ ಹೊವ್ನ್ ರ್‍ಹಾತಾ, ಹೊಲ್ಯಾರ್ ಉಲ್ಲ್ಯಾ ಜುದೆವಾಂಚ್ಯಾ ಲೊಕಾನಿ ತೆಕಾ ವಿರೊಧ್ ಹೊವ್ನ್ ಯವ್ಜನ್ ಕರ್‍ಲ್ಯಾನಿ, ತೆಚ್ಯಾಸಾಟ್ನಿ ಪಾವ್ಲುನ್ ಸಿರಿಯಾ ಮನ್ತಲ್ಲ್ಯಾ ಶಾರಾಕ್ ಮೆಸೆದೊನಿಯಾಕ್ನಾ ಪಾಟಿ ಪರ್ತುನ್ ಜಾವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:3
19 ತಿಳಿವುಗಳ ಹೋಲಿಕೆ  

ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.


ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;


ಅನಂತರ ನಾನು ಸಿರಿಯ ಮತ್ತು ಸಿಲಿಸಿಯ ಪ್ರಾಂತ್ಯಗಳಿಗೆ ಹೋದೆ.


ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.


ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.


ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.


ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.


ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.


ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.


ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು