Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:30 - ಕನ್ನಡ ಸತ್ಯವೇದವು C.L. Bible (BSI)

30 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವ್ಯತ್ಯಾಸ ಬೋಧನೆಗಳನ್ನು ಮಾಡಿ ಯೇಸುವಿನ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಝುಟಿ ಶಿಕಾಪಾ ಸಾಂಗುನ್ ತುಮ್ಚ್ಯಾತ್ಲ್ಯಾ ಉಲ್ಲ್ಯಾ ವಿಶ್ವಾಸಿ ಲೊಕಾಕ್ನಿ ವಡುನ್ ನ್ಹೆತಲಿ ಲೊಕಾಬಿ ಹಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:30
23 ತಿಳಿವುಗಳ ಹೋಲಿಕೆ  

ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ನಿನ್ನಾ ಕಣ್ಣು ಇಲ್ಲದ್ದನ್ನೇ ಕಾಣುವುದು; ಮನಸ್ಸು ವಕ್ರವಾದುವುಗಳನ್ನೇ ಹೊರಪಡಿಸುವುದು.


ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.


ಆದರೆ ನಿನ್ನಲ್ಲಿ ಒಂದು ಒಳ್ಳೆಯ ಗುಣವಿದೆ. ನಾನು ದ್ವೇಷಿಸುವಂತೆ ನೀನು ಸಹ ನಿಕೊಲಾಯಿತರ ದುಷ್ಕೃತ್ಯಗಳನ್ನು ದ್ವೇಷಿಸುತ್ತಿರುವೆ.


ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.


ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.


ಹಾಗಾದರೆ ಕೆಲವು ಕಾಲದ ಹಿಂದೆ ಕ್ರಾಂತಿಯೆಬ್ಬಿಸಿ ನಾಲ್ಕು ಸಾವಿರ ಡಕಾಯಿತರನ್ನು ಅಡವಿಗೆ ಕರೆದುಕೊಂಡು ಹೋದ ಈಜಿಪ್ಟಿನವನು ನೀನೇ ಅಲ್ಲವೇ?’ ಎಂದು ಪ್ರಶ್ನಿಸಿದನು.


ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.


ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.


ಹೀಗಾಗುವಾಗ ಅವರಿಗೆ ಅಲ್ಪಸ್ವಲ್ಪ ಸಹಾಯ ದೊರೆಯುವುದು. ಆ ಬಳಿಕ ಬಹುಮಂದಿ ನಯನವಿರಾದ ಮಾತುಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.


ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು