Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:32 - ಕನ್ನಡ ಸತ್ಯವೇದವು C.L. Bible (BSI)

32 “ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಅತ್ತಾ ಮಿಯಾ ತುಮ್ಕಾ ದೆವಾಚ್ಯಾ, ಅನಿ ತೆಚ್ಯಾ ಕುರ್ಪೆಚ್ಯಾ ಬರ್‍ಯಾ ಖಬ್ರೆಚ್ಯಾ ಜಗ್ಗೊಳ್ ಒಪ್ಸುನ್ ದಿತಾ,ತೆಕಾ ತುಮ್ಕಾ ಪವಿತ್ರ್ ಕರ್ತಲಿ ಬಳ್ ಹಾಯ್, ಅನಿ ತುಮ್ಕಾ ದೆವ್ ಅಪ್ಲ್ಯಾ ಸಗ್ಳ್ಯಾ ಲೊಕಾಕ್ನಿ ದಿತಲೊ ಆಶಿರ್ವಾದ್ ದಿತಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:32
37 ತಿಳಿವುಗಳ ಹೋಲಿಕೆ  

ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.


ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.


ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.


ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.


ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.


ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.


ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.


ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.


ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.


ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.


ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.


ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.


ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.


ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.


ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.


ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.


ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.


ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”


ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.


ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.


ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು