Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:35 - ಕನ್ನಡ ಸತ್ಯವೇದವು C.L. Bible (BSI)

35 ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವೂ ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು - ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯವೆಂಬದಾಗಿ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಸಗ್ಳ್ಯಾ ವಿಶಯಾಕ್ನಿ ಮಿಯಾಚ್ ತುಮ್ಕಾ ಉದಾರನ್ ದಾಕ್ವುನ್ ದಿಲಾ, ತುಮಿ ಬಿ ತಸೆಚ್ ರಾಬುನ್ ಬಳ್ ನಸಲ್ಯಾಕ್ನಿ ಮಜ್ಜತ್ ಕರುಚೆ ಅನಿ “ಘೆತಲ್ಯಾಚ್ಯಾಕಿಂತಾ ದಿತಲ್ಯಾತ್ ಲೈ ಆಶಿರ್ವಾದ್ ಹಾಯ್” ಮನುನ್ ಧನಿಯಾ ಜೆಜುನ್ ಸಾಂಗಲಿ ಗೊಸ್ಟ್ ಯಾದ್ ಥವ್ನ್ ಘೆವಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:35
28 ತಿಳಿವುಗಳ ಹೋಲಿಕೆ  

ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.


ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.


ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.


ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.


ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.


ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.


ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.


ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು