Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:4 - ಕನ್ನಡ ಸತ್ಯವೇದವು C.L. Bible (BSI)

4 ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಪುರ್ರನ ಮಗನಾದ ಬೆರೋಯಪಟ್ಟಣದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಪಟ್ಟಣದ ಗಾಯನೂ ತಿಮೊಥೆಯನೂ ಆಸ್ಯಸೀಮೆಯವರಲ್ಲಿ ತುಖಿಕನೂ ತ್ರೊಫಿಮನೂ ಆಸ್ಯಸೀಮೆಯವರೆಗೆ ಅವನ ಜೊತೆಯಲ್ಲಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಬೆರೆಯಾತ್ಲೊ ಪುರ್ರ್ ಮನ್ತಲ್ಯಾಚೊ ಲೆಕ್ ಸೊಪತ್ರ್ ಥೆಸಲೊನಿಕಾತ್ಲೊ ಅರಿಸ್ತಾರ್ಕ್, ಅನಿ ಸೆಕುಂದ್ ದರ್ಬೆಚೊ ಗಾಯಸ್, ಅನಿ ಆಸಿಯಾ ಪ್ರಾಂತ್ಯಾತ್ಲೊ ತುಕಿಕ್, ತ್ರೊಪಿಮ್ ಅನಿ ತಿಮೊಥಿ ಹೆನಿ ಸಗ್ಳೆ ತೆಚ್ಯಾ ವಾಂಗ್ಡಾ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:4
29 ತಿಳಿವುಗಳ ಹೋಲಿಕೆ  

ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.


ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ತ್ರೊಫಿಮನನ್ನು ಅನಾರೋಗ್ಯದ ನಿಮಿತ್ತ ಮಿಲೇತದಲ್ಲಿಯೇ ಬಿಟ್ಟಿದ್ದೇನೆ.


ಪ್ರಿಯ ಸಹೋದರ ತುಖಿಕನು ನನ್ನ ವಿಷಯವಾಗಿಯೂ ನನ್ನ ಕೆಲಸಕಾರ್ಯಗಳ ವಿಷಯವಾಗಿಯೂ ನಿಮಗೆ ತಿಳಿಸುವನು. ಆತ ಪ್ರಭುವಿನ ಪ್ರಾಮಾಣಿಕ ಸೇವಕ.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದಿರುವುದರಿಂದ ಅರ್ತೆಮನನ್ನಾಗಲೀ ತುಖಿಕನನ್ನಾಗಲೀ ನಿನ್ನ ಬಳಿಗೆ ಕಳಿಸುತ್ತೇನೆ. ಅವರಲ್ಲೊಬ್ಬನು ನಿನ್ನ ಬಳಿಗೆ ಬಂದಾಗ ನೀನು ಕೂಡಲೇ ನಿಕೊಪೊಲಿಗೆ ಬಂದುಬಿಡು.


ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ.


ನಮ್ಮ ಪ್ರಿಯ ಸಹೋದರ ತುಖಿಕನು ನನ್ನ ವಿಷಯದಲ್ಲಿ ನಿಮಗೆ ಎಲ್ಲಾ ವರ್ತಮಾನವನ್ನು ಕೊಡುವನು. ಆತನು ಪ್ರಾಮಾಣಿಕ ಸೇವಕನೂ ಪ್ರಭುವಿನ ಸೇವೆಯಲ್ಲಿ ನನ್ನ ಸಂಗಡಿಗನೂ ಆಗಿದ್ದಾನೆ.


ಎಫೆಸದ ತ್ರೊಫಿಮ ಎಂಬವನು ಪೌಲನ ಸಂಗಡ ಪಟ್ಟಣದಲ್ಲಿ ಇದ್ದುದನ್ನು ಅವರು ನೋಡಿದ್ದರು. ಈಗ ಅವನನ್ನೂ ದೇವಾಲಯದೊಳಕ್ಕೆ ಪೌಲನು ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.


ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.


ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.


ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.


ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.


ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.


ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.


ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.


ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.


ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು.


ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು.


ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ,


ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ಬಂದಮೇಲೆ ಅವರಿಗೆ ಹೀಗೆಂದನು : “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು