Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:9 - ಕನ್ನಡ ಸತ್ಯವೇದವು C.L. Bible (BSI)

9 ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ದೀರ್ಘಕಾಲ ಮಾತನಾಡುತ್ತಲೇ ಇದ್ದುದರಿಂದ ಯುತಿಕನಿಗೆ ಗಾಢನಿದ್ರೆ ಹತ್ತಿತು; ತೂಕಡಿಕೆ ಹೆಚ್ಚಾಗಿ ಅವನು ಮೂರನೆಯ ಅಂತಸ್ತಿನಿಂದ ನೆಲಕ್ಕೆ ಬಿದ್ದುಬಿಟ್ಟನು. ಅವನನ್ನು ಎತ್ತಿ ನೋಡುವಾಗ ಅವನು ಸತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಯೂತಿಖನೆಂಬ ಒಬ್ಬ ಯೌನವಸ್ಥನು ಕಿಟಿಕಿಯಲ್ಲಿ ಕೂತುಕೊಂಡು ಗಾಢನಿದ್ರೆಯಿಂದ ತೂಕಡಿಸಿದನು. ಪೌಲನು ಇನ್ನೂ ಪ್ರಸಂಗ ಮಾಡುತ್ತಾ ಇದ್ದಾಗ ಆ ಯೌವನಸ್ಥನು ನಿದ್ರೆಯಿಂದ ತೂಕಡಿಕೆ ಹೆಚ್ಚಾಗಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದನು; ಅವನನ್ನು ಎತ್ತಿನೋಡುವಾಗ ಸತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ಮಾತಾಡುತ್ತಲೇ ಇದ್ದನು. ಇತ್ತ ಯುವಕನು ಗಾಢವಾಗಿ ನಿದ್ರಿಸುತ್ತಾ ಮೂರನೆ ಅಂತಸ್ತಿನಿಂದ ಕೆಳಗಡೆ ಬಿದ್ದುಬಿಟ್ಟನು. ಜನರು ಕೆಳಗಿಳಿದು ಹೋಗಿ ಅವನನ್ನು ಎತ್ತಿ ನೋಡಿದಾಗ ಅವನು ಸತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಯುತಿಕ್ ಮನ್ತಲೊ ದಾಂಡ್ಗೊ ಝಿಲ್ಗೊ ಕಿಡ್ಕಿರ್ ಬಸುನ್ ನಿಜೆನ್ ಝಮುನ್ಗೆತ್ ಹೊತ್ತೊ, ಪಾವ್ಲು ಬೊಲಿತ್ ರ್‍ಹಾತಾನಾಚ್ ತೊ ಝಿಲ್ಗೊ ತಿನ್ವಾ ಮಾಳ್ಗಿ ವೈನಾ ಪಡ್ಲೊ, ಲೊಕಾನಿ ಖಾಲ್ತಿ ಉತ್ರುನ್ ತೆಕಾ ಉಕ್ಲುನ್ ಬಗಲ್ಲ್ಯಾ ತನ್ನಾ ತೊ ಮರುನ್ ಪಡಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:9
9 ತಿಳಿವುಗಳ ಹೋಲಿಕೆ  

ಅನಿರೀಕ್ಷಿತವಾಗಿ ಅವನು ಬಂದಾಗ ನೀವು ನಿದ್ರಿಸುತ್ತಿರುವುದನ್ನು ಕಂಡಾನು!


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.


ಆದರೆ ಎಲೀಯನು, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿದನು.


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ನಾವು ಸಭೆಸೇರಿದ್ದ ಮೇಲಂತಸ್ತಿನ ಕೊಠಡಿಯಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.


ಆದರೆ ಪೌಲನು ಕೆಳಗೆ ಇಳಿದುಹೋಗಿ ಅವನ ಮೇಲೆ ಬಾಗಿ, ಅವನನ್ನು ತಬ್ಬಿಕೊಂಡು, “ಚಿಂತಿಸಬೇಡಿ, ಇವನಲ್ಲಿ ಇನ್ನೂ ಜೀವವಿದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು