Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:18 - ಕನ್ನಡ ಸತ್ಯವೇದವು C.L. Bible (BSI)

18 ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೇಹಿರಿಯರೆಲ್ಲರು ಸಹ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಮರುದಿನ ಯಾಕೋಬನನ್ನು ಸಂದರ್ಶಿಸಲು ಪೌಲನು ನಮ್ಮನ್ನು ಕರೆದುಕೊಂಡು ಹೋದನು. ಹಿರಿಯರೆಲ್ಲರು ಅಲ್ಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ದುಸ್ರ್ಯಾಂದಿಸಿ ಪಾವ್ಲುನ್ ಅಮ್ಕಾ ಬಲ್ವುನ್ ಘೆವ್ನ್ ಜಾಕೊಬಾಕ್ ಭೆಟುಕ್ ನ್ಹೆಲ್ಯಾನ್, ತನ್ನಾ ಮುಖಂಡಾ ಸಗ್ಳಿ ಥೈ ಮಿಳುನ್ ಯೆಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:18
12 ತಿಳಿವುಗಳ ಹೋಲಿಕೆ  

ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.


ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.


ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ,


ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.


“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!


ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.


ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.


ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ;


ನಾನು ಜೆರುಸಲೇಮಿಗೆ ದೈವಾರಾಧನೆಗೆಂದು ಹೋಗಿ ಇಲ್ಲಿಗೆ ಹನ್ನೆರಡು ದಿನಗಳಿಗಿಂತ ಹೆಚ್ಚಾಗಿಲ್ಲ. ಇದನ್ನು ತಾವೇ ವಿಚಾರಿಸಿ ತಿಳಿದುಕೊಳ್ಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು