Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:2 - ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಫೆನಿಷ್ಯಕ್ಕೆ ಹೋಗುವ ಹಡಗನ್ನು ಕಂಡು ಅದನ್ನೇರಿ ಪ್ರಯಾಣ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು, ಅದರಲ್ಲಿ ಪ್ರಯಾಣವನ್ನು ಮುಂದುವರೆಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಹತ್ತಿ ಪ್ರಯಾಣವನ್ನು ಸಾಗಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಫೆನಿಷ್ಯಕ್ಕೆ ಹೋಗುವ ಹಡಗನ್ನು ನಾವು ಅಲ್ಲಿ ಕಂಡೆವು. ನಾವು ಆ ಹಡಗನ್ನೇರಿ ಪ್ರಯಾಣ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪೊಯಿನಿಕ್ಯಾಕ್ ಜಾತಲಿ ಢೊನ್ ಚಡುನ್‍ ಅಮಿ ಪ್ರಯಾನ್ ಕರುಕ್ ಲಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:2
5 ತಿಳಿವುಗಳ ಹೋಲಿಕೆ  

ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು.


ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.


ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.


ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು