Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:27 - ಕನ್ನಡ ಸತ್ಯವೇದವು C.L. Bible (BSI)

27 ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಏಳು ದಿನಗಳು ಮುಗಿಯುತ್ತಿದ್ದಂತೆ ಅಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಚದುರಿಸಿ ಅವನನ್ನು ಹಿಡಿದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯಸೀಮೆಯಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲಯದಲ್ಲಿ ಕಂಡು ಗುಂಪುಕೂಡಿದ ಜನರೆಲ್ಲರನ್ನು ಕಲಕಿ ಅವನನ್ನು ಹಿಡಿದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆ ಏಳು ದಿನಗಳ ಅವಧಿ ಮುಗಿಯುವುದರಲ್ಲಿತ್ತು. ಆದರೆ ಏಷ್ಯಾದಿಂದ ಬಂದಿದ್ದ ಕೆಲವು ಯೆಹೂದ್ಯರು ಪೌಲನನ್ನು ಕಂಡು ಜನಸಮೂಹವನ್ನು ಉದ್ದೇಶಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತಿ ಸಾತ್ ದಿಸಾ ಸರ್ತಲ್ಯಾ ಯೆಳಾರ್ ಹೊತ್ತಿ, ಖರೆ ಎಶ್ಯಾಕ್ನಾ ಯೆಲ್ಲಿ ಜುದೆವಾಂಚಿ ಲೊಕಾನಿ ಪಾವ್ಲುಕ್ ಗುಡಿತ್ ಬಗುನ್ ತೆಂಕಾ ಪಗ್ಳುನ್ ಧುರ್ ಕರುನ್ ತೆಕಾ ಧರುನ್ ಘೆವ್ನ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:27
24 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು.


ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.


ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.


ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.


ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.


ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.


ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.


ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.


ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು.


ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.


ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.


ಆಕಸ್ಮಿಕವಾಗಿ ಯಾರಾದರೂ ಅವನ ಬಳಿಯಲ್ಲೇ ಸತ್ತು, ಅವನು ಪ್ರತಿಷ್ಠಿಸಿಕೊಂಡಿದ್ದ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಂದು ಅಂದರೆ ಶುದ್ಧೀಕರಣ ದಿನದಂದು ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.


ನಾಜೀರ ವ್ರತಸ್ಥನು ತನ್ನ ವ್ರತಾವಧಿ ಮುಗಿದಾಗ ಈ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬಂದು ಸರ್ವೇಶ್ವರನಿಗೆ ಈ ಕಾಣಿಕೆಗಳನ್ನು ಸಲ್ಲಿಸಬೇಕು;


“ಮನುಷ್ಯನ ಶವವನ್ನು ಸೋಂಕಿದವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯದವರೂ,


ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.


ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.


ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.


ನಾನು ಜೆರುಸಲೇಮಿಗೆ ದೈವಾರಾಧನೆಗೆಂದು ಹೋಗಿ ಇಲ್ಲಿಗೆ ಹನ್ನೆರಡು ದಿನಗಳಿಗಿಂತ ಹೆಚ್ಚಾಗಿಲ್ಲ. ಇದನ್ನು ತಾವೇ ವಿಚಾರಿಸಿ ತಿಳಿದುಕೊಳ್ಳಬಹುದು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು