Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:30 - ಕನ್ನಡ ಸತ್ಯವೇದವು C.L. Bible (BSI)

30 ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ನಾಲ್ಕು ದಿಕ್ಕುಗಳಿಂದಲೂ ಓಡಿಬಂದರು. ಪೌಲನನ್ನು ದೇವಾಲಯದಿಂದ ಹೊರಗೆ ಎಳೆದುಹಾಕಿ ಮಹಾದೇವಾಲಯದ ದ್ವಾರಗಳನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು, ಜನರು ಎಲ್ಲಾ ಕಡೆಯಿಂದಲೂ ಓಡಿಬಂದು ಸೇರಿಕೊಂಡರು. ಪೌಲನನ್ನು ಹಿಡಿದು, ದೇವಾಲಯದ ಹೊರಗಡೆಗೆ ಎಳೆದುಕೊಂಡು ಬಂದ ಕೂಡಲೇ ಬಾಗಿಲುಗಳನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಪಟ್ಟಣವೆಲ್ಲಾ ಕಲಕಿಹೋಯಿತು, ಜನರು ಎಲ್ಲಾ ಕಡೆಯಿಂದ ಓಡಿಬಂದು ಕೂಡಿದರು. ಮತ್ತು ಪೌಲನನ್ನು ಹಿಡಿದು ದೇವಾಲಯದ ಹೊರಗೆ ಎಳೆದುಕೊಂಡು ಬಂದರು. ಕೂಡಲೇ ಬಾಗಿಲುಗಳನ್ನು ಮುಚ್ಚಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಜೆರುಸಲೇಮಿನ ಜನರೆಲ್ಲರು ಬಹು ಕೋಪಗೊಂಡರು. ಅವರೆಲ್ಲರು ಓಡಿಹೋಗಿ ಪೌಲನನ್ನು ಹಿಡಿದು ದೇವಾಲಯದೊಳಗಿಂದ ಎಳೆದುಕೊಂಡು ಬಂದರು. ಆ ಕೂಡಲೇ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ತನ್ನಾ ಶಾರಾತ್ ಪುರಾ ಗದ್ದಲ್ ಶುರು ಹೊತಾ, ಸಗ್ಳ್ಯಾ ಕಡ್ಲಿ ಲೊಕಾ ಪಳುನ್ ಯೆವ್ನ್ ಪಾವ್ಲಿ ತೆಕಾ ಬಂಧಿ ಕರುನ್ ಗುಡಿತ್ನಾ ಭಾಯ್ರ್ ವಡುನ್ ಹಾನುನ್ ಹೊಲೆ, ಗುಡಿಚಿ ಸಗ್ಳಿ ದಾರಾಬಿ ಎಗ್ದಾಚ್ ಧಾಪುನ್ ಹೊಲಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:30
9 ತಿಳಿವುಗಳ ಹೋಲಿಕೆ  

ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು.


ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.


ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.


ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.


ಹೀಗೆ ಯೇಸು ಜೆರುಸಲೇಮನ್ನು ಪ್ರವೇಶಿಸಿದಾಗ ನಗರಕ್ಕೆ ನಗರವೇ ಕಲಕಲಗೊಂಡಿತು. ಜನರು “ಯಾರಿವರು?” ಎಂದು ವಿಚಾರಿಸಲಾರಂಭಿಸಿದರು.


ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು