Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:33 - ಕನ್ನಡ ಸತ್ಯವೇದವು C.L. Bible (BSI)

33 ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಸೇನಾಧಿಪತಿಯು ಹೋಗಿ ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟಲು ಸೈನಿಕರಿಗೆ ಹೇಳಿದನು. ಬಳಿಕ ಸೇನಾಧಿಪತಿಯು, “ಈ ಮನುಷ್ಯನು ಯಾರು? ಇವನು ಏನು ತಪ್ಪು ಮಾಡಿದನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಸೆನಾಧಿಪತಿನ್ ಸೈನಿಕಾಕ್ನಿ ಜಾವ್ನ್ ಪಾವ್ಲುಕ್ ಧರುನ್ ದೊನ್ ಸರ್ಪೊಳಿಯಾನಿ ಭಾಂದುಕ್ ಸಾಂಗ್ಲ್ಯಾನ್, ಅನಿ ತೆನಿ ಹ್ಯೊ ಮಾನುಸ್ ಕೊನ್? ಹೆನಿ ಕಾಯ್ ಚುಕ್ ಕರ್‍ಲಾ? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:33
18 ತಿಳಿವುಗಳ ಹೋಲಿಕೆ  

ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.


ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.


ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.


ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.


ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.


ಪೌಲನನ್ನು ಪ್ರಶ್ನಿಸಲು ಬಂದಿದ್ದವರು ಆ ಕ್ಷಣವೇ ಅವನನ್ನು ಬಿಟ್ಟು ಅಗಲಿದರು. ರೋಮಿನ ಪೌರನೊಬ್ಬನನ್ನು ಬಂಧಿಸಿದುದು ಮನವರಿಕೆಯಾದಾಗ ಸಹಸ್ರಾಧಿಪತಿಗೂ ಭಯವಾಯಿತು.


ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.


ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.


ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.


ಫಿಲಿಷ್ಟಿಯರ ಮುಖಂಡರು ಅಂಥ ಏಳು ಹಸಿ ತಂತಿಗಳನ್ನು ಅವಳಿಗೆ ತಂದುಕೊಟ್ಟರು.


ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ,” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು.


ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು