Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:9 - ಕನ್ನಡ ಸತ್ಯವೇದವು C.L. Bible (BSI)

9 ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನಿಗೆ ಕನ್ಯೆಯರಾದ ನಾಲ್ಕುಮಂದಿ ಹೆಣ್ಣು ಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನಿಗೆ ಮದುವೆಯಾಗದ ನಾಲ್ಕು ಮಂದಿ ಹೆಣ್ಣುಮಕ್ಕಳಿದ್ದರು; ಅವರು ಪ್ರವಾದಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮದುವೆಯಾಗಿಲ್ಲದ ನಾಲ್ಕುಮಂದಿ ಹೆಣ್ಣುಮಕ್ಕಳು ಅವನಿಗಿದ್ದರು. ಅವರೆಲ್ಲರಿಗೂ ಪ್ರವಾದಿಸುವ ವರವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತೆಕಾ ಲಗಿನ್ ಹೊವ್ ನಸಲ್ಲಿ ಲೆಕಿಯಾ ಹೊತ್ತಿ, ತೆನಿ ದೆವಾಚಿ ಬರಿ ಬಖರ್ ಪ್ರವಾದನ್ ಕರ್‍ತಲೆ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:9
13 ತಿಳಿವುಗಳ ಹೋಲಿಕೆ  

ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.


ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.


ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.


“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.


ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


“ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.


ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.


ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.


ಈ ರೀತಿ ನಿಶ್ಚಯವಾದ ಕನ್ಯೆಯನ್ನು ಮದುವೆಮಾಡಿಕೊಳ್ಳುವುದು ಒಳ್ಳೆಯದೇ, ಮದುವೆ ಮಾಡಿಕೊಳ್ಳದಿರುವುದು ಇನ್ನಷ್ಟು ಒಳ್ಳೆಯದೇ.


“ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಭವಿಷ್ಯವಾಣಿ ಎಂದು ಹೇಳುವ ನಿನ್ನ ಸ್ವಕುಲ ಮಹಿಳೆಯರ ಕಡೆಗೆ ಮುಖಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು