Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:10 - ಕನ್ನಡ ಸತ್ಯವೇದವು C.L. Bible (BSI)

10 ‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 “ಆಗ ನಾನು; ‘ಕರ್ತನೇ, ನಾನೇನು ಮಾಡಬೇಕು’? ಎಂದು ಕೇಳಲು ಕರ್ತನು ನನಗೆ; ‘ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವುದಕ್ಕೆ ನಿನಗೆ ನೇಮಿಸಿರುವುದನ್ನೆಲ್ಲಾ ಅಲ್ಲಿ ತಿಳಿಸಲ್ಪಡುವುದು’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ನಾನು - ಕರ್ತನೇ, ನಾನೇನು ಮಾಡಬೇಕು? ಎಂದು ಕೇಳಲು ಕರ್ತನು ನನಗೆ - ನೀನೆದ್ದು ದಮಸ್ಕದೊಳಕ್ಕೆ ಹೋಗು, ಮಾಡುವದಕ್ಕೆ ನಿನಗೆ ನೇವಿುಸಿರುವದೆಲ್ಲಾ ಅಲ್ಲಿ ತಿಳಿಸಲ್ಪಡುವದು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ನಾನು, ‘ಪ್ರಭುವೇ, ನಾನೇನು ಮಾಡಲಿ’ ಎಂದೆನು. ಪ್ರಭುವು ‘ಎದ್ದು ದಮಸ್ಕದೊಳಗೆ ಹೋಗು. ನಾನು ನಿನಗೆ ನೇಮಿಸಿರುವ ಕೆಲಸಗಳನ್ನೆಲ್ಲಾ ಅಲ್ಲಿ ನಿನಗೆ ತಿಳಿಸಲಾಗುವುದು’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 “ತನ್ನಾ ಧನಿಯಾ ಮಿಯಾ ಕಾಯ್ ಕರು?” ಮಟ್ಲೊ ಧನಿಯಾನ್ ಉಟುನ್ ದಮಸ್ಕಾ ಶಾರಾತ್ ಜಾ ಮಿಯಾ ಅದ್ದಿಚ್ ನೆಮ್ಸುನ್ ತುಕಾ ಥವಲ್ಲಿ ಸಗ್ಳಿ ಕಾಮಾ ತುಕಾ ಥೈ ಕಳ್ವುನ್ ಹೊತಾ ಮನುನ್ ಜವಾಬ್ ದಿಲ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:10
9 ತಿಳಿವುಗಳ ಹೋಲಿಕೆ  

ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಬೆಳಕಿನ ಪ್ರಕಾಶದ ನಿಮಿತ್ತ ದೃಷ್ಟಿಹೀನನಾದೆ. ಜೊತೆಯಲ್ಲಿದ್ದವರು ನನ್ನನ್ನು ದಮಸ್ಕಸಿಗೆ ಕೈಹಿಡಿದು ನಡೆಸಿಕೊಂಡು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು