Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:20 - ಕನ್ನಡ ಸತ್ಯವೇದವು C.L. Bible (BSI)

20 ನಿಮ್ಮ ಸಾಕ್ಷಿಯಾದ ಸ್ತೇಫನನ ಹತ್ಯೆ ನಡೆದಾಗ ನಾನೂ ಸಮ್ಮತಿಸಿ ಅಲ್ಲೇ ಇದ್ದೆ. ಅವನನ್ನು ಕೊಲೆಮಾಡುತ್ತಿದ್ದವರ ಬಟ್ಟೆಬರೆಗಳಿಗೆ ನಾನೇ ಕಾವಲು ನಿಂತೆ. ಇದೆಲ್ಲ ಅವರಿಗೆ ಚೆನ್ನಾಗಿ ಗೊತ್ತಿದೆ,’ ಎಂದೆ. ಅದಕ್ಕೆ ಪ್ರಭು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ ನಾನೂ ಹತ್ತರ ನಿಂತು ಒಪ್ಪಿಕೊಂಡು ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಿನ್ನ ಸಾಕ್ಷಿಯಾದ ಸ್ತೆಫನನು ಕೊಲ್ಲಲ್ಪಟ್ಟಾಗ ನಾನು ಅಲ್ಲಿದ್ದದ್ದು ಸಹ ಜನರಿಗೆ ಗೊತ್ತಿದೆ. ಸ್ತೆಫನನನ್ನು ಕೊಲ್ಲಲು ಅವರು ನಿರ್ಧರಿಸಿದಾಗ ನಾನೂ ಅದಕ್ಕೆ ಒಪ್ಪಿಗೆ ಸೂಚಿಸಿ ಅಲ್ಲೇ ನಿಂತುಕೊಂಡಿದ್ದೆನು. ಅಲ್ಲದೆ ಅವನನ್ನು ಕೊಲ್ಲುತ್ತಿದ್ದ ಜನರ ಮೇಲಂಗಿಗಳನ್ನು ಸಹ ನಾನು ಹಿಡಿದುಕೊಂಡಿದ್ದೆ!’ ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತುಜಿ ಸಾಕ್ಷಿ ಹೊಲ್ಲ್ಯಾ ಸ್ತೆಫನ್ ಮನ್ತಲ್ಯಾಕ್ ಜಿವಾನಿ ಮಾರ್ತಾನಾ ಮಿಯಾ ಥೈ ಹೊತ್ತೆ ಬಿ ಲೊಕಾಕ್ನಿ ಗೊತ್ತ್ ಹೊತ್ತೆ, ಸ್ತೆಫನ್ ಮನ್ತಲ್ಯಾಕ್ ಜಿವಾನಿ ಮಾರುಕ್ ತೆನಿ ನಿರ್ಧಾರ್ ಕರಲ್ಲ್ಯಾ ತನ್ನಾ ಮಿಯಾ ತೆಕಾ ಒಪ್ಗಿ ದಿವ್ನ್ ಥೈ ಇಬೆ ಹೊತ್ತೊ, ಅನಿ ತೆಕಾ ಜಿವಾನಿ ಮಾರ್ತಲ್ಲ್ಯಾಂಚೆ ಝಗೆಬಿ ಮಿಯಾ ಧರುನ್ ಘೆವ್ನ್ ಇಬೆ ಹೊತ್ತೊ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:20
8 ತಿಳಿವುಗಳ ಹೋಲಿಕೆ  

ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.


ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.


ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು