Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:21 - ಕನ್ನಡ ಸತ್ಯವೇದವು C.L. Bible (BSI)

21 ‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ಆತನು; ‘ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು’” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಆದರೆ ಯೇಸು ನನಗೆ, ‘ಈಗ ಹೊರಡು, ಬಹುದೂರದಲ್ಲಿರುವ ಯೆಹೂದ್ಯರಲ್ಲದ ಜನರ ಬಳಿಗೆ ನಾನು ನಿನ್ನನ್ನು ಕಳುಹಿಸುವೆನು’ ಎಂದು ಹೇಳಿದನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಖರೆ ಧನಿಯಾನ್ ಮಾಕಾ “ ಜಾ ಲೈ ಧುರ್ ಹೊತ್ತ್ಯಾ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಂಚ್ಯಾ ಜಗ್ಗೊಳ್ ಮಿಯಾ ತುಕಾ ಧಾಡ್ತಾ ಮನುನ್ ಸಾಂಗ್ಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:21
15 ತಿಳಿವುಗಳ ಹೋಲಿಕೆ  

ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.


ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.


ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು