25 ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.
25 ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು.
25 ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು.
25 ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು.
ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.
ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.
ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.
ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.