ಅಪೊಸ್ತಲರ ಕೃತ್ಯಗಳು 22:30 - ಕನ್ನಡ ಸತ್ಯವೇದವು C.L. Bible (BSI)30 ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪೌಲನ ವಿರುದ್ಧ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು, ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ, ಮುಖ್ಯಯಾಜಕರೂ, ಹಿರೀಸಭೆಯವರೆಲ್ಲರೂ ಕೂಡಿಬರುವುದಕ್ಕೆ ಅಪ್ಪಣೆ ಕೊಟ್ಟು, ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪೌಲನ ಮೇಲೆ ಯೆಹೂದ್ಯರು ಯಾವ ತಪ್ಪು ಹೊರಿಸುತ್ತಾರೆಂಬುವ ವಿಷಯದಲ್ಲಿ ನಿಜವಾದ ಸಂಗತಿಯನ್ನು ತಿಳಿಯಬೇಕೆಂದು ಅಪೇಕ್ಷಿಸಿ ಸಹಸ್ರಾಧಿಪತಿಯು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಮಹಾಯಾಜಕರೂ ಹಿರೀಸಭೆಯವರೆಲ್ಲರೂ ಕೂಡಿಬರುವದಕ್ಕೆ ಅಪ್ಪಣೆಕೊಟ್ಟು ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ದುಸ್ರೆಂದಿಸಿ ಪಾವ್ಲುಕ್ ವಿರೊಧ್ ಹೊವ್ನ್ ಜುದೆವಾಂಚ್ಯಾ ಲೊಕಾನಿ ಹಾನಲ್ಲೆ ಅಪರಾಧ್ ಕಾಯ್ ಮನುನ್ ಕಳ್ವುನ್ ಘೆವ್ಕ್ ಸೆನಾಧಿಪತಿನ್ ನಿರ್ಧಾರ್ ಕರ್‍ಲ್ಯಾನ್, ತೆಚಾ ಸಾಟ್ನಿ ತೆನಿ ಮುಖ್ಯ್ ಯಾಜಕ್ ಜುದೆವಾಂಚ್ಯಾ ಝಡ್ತಿ ಕರ್‍ತಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿಬಿ ಗೊಳಾ ಹೊವ್ನ್ ಯೆವ್ಕ್ ಹುಕುಮ್ ದಿಲ್ಲ್ಯಾನ್, ಸೆನಾಧಿಪತಿನ್ ಪಾವ್ಲುಚಿ ಬಾಂದಲ್ಲಿ ಸರ್ಪೊಳಿಯಾ ಕಾಡುನ್ ಟಾಕುನ್ ತೆಕಾ ಭಾಯ್ರ್ ಬಲ್ವುನ್ ಘೆವ್ನ್ ಯೆವ್ನ್ ತಾಂಡ್ಯಾಚ್ಯಾ ಇದ್ರಾಕ್ ಇಬೆ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |