Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:6 - ಕನ್ನಡ ಸತ್ಯವೇದವು C.L. Bible (BSI)

6 “ಹೀಗೆ ಪ್ರಯಾಣ ಮಾಡುತ್ತಾ ದಮಸ್ಕಸನ್ನು ಸಮೀಪಿಸಿದೆ. ಆಗ ಸುಮಾರು ನಡುಮಧ್ಯಾಹ್ನ. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾಬೆಳಕೊಂದು ನನ್ನ ಸುತ್ತಲೂ ಮಿಂಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಪ್ರಯಾಣಮಾಡುತ್ತಾ ದಮಸ್ಕದ ಹತ್ತರಕ್ಕೆ ಬಂದಾಗ ಸುಮಾರು ಮಧ್ಯಾಹ್ನದಲ್ಲಿ ಫಕ್ಕನೆ ಆಕಾಶದೊಳಗಿಂದ ಒಂದು ದೊಡ್ಡ ಬೆಳಕು ನನ್ನ ಸುತ್ತಲು ಹೊಳೆಯಿತು, ನಾನು ನೆಲಕ್ಕೆ ಬಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ನಾನು ಪ್ರಯಾಣ ಮಾಡುತ್ತಾ ದಮಸ್ಕದ ಸಮೀಪಕ್ಕೆ ಬಂದಾಗ ಒಂದು ಘಟನೆ ಸಂಭವಿಸಿತು. ಆಗ ಸುಮಾರು ಮಧ್ಯಾಹ್ನವಾಗಿತ್ತು. ಇದ್ದಕ್ಕಿದ್ದಂತೆ ಪ್ರಕಾಶಮಾನವಾದ ಬೆಳಕೊಂದು ನನ್ನ ಸುತ್ತಲೂ ಪ್ರಕಾಶಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಪ್ರಯಾನ್ ಕರುನ್ಗೆತ್ ದಮಸ್ಕಾಚ್ಯಾ ಶಾರಾಚ್ಯಾ ಜಗ್ಗೊಳ್ ಯೆಲ್ಲ್ಯಾ ತನ್ನಾ ಸುಮಾರ್ ದೊಪಾರ್ ಹೊಲ್ಲಿ ಹೊತ್ತಿ, ತನ್ನಾ ಯೆಗ್ದಾಚ್ ಹೊಳ್ವತಲ್ಲೊ ಎಕ್ ಉಜ್ವೊಡ್ ಮಾಜ್ಯಾ ಬೊತ್ಯಾನ್ ಹೊಳ್ವಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:6
11 ತಿಳಿವುಗಳ ಹೋಲಿಕೆ  

ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.


ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.


ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.


ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.


ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;


ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.


ನಾನು ನೆಲಕ್ಕುರುಳಿದೆ. ಆಗ ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?’ ಎಂಬ ವಾಣಿ ಕೇಳಿಸಿತು.


ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.


ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು