Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ನೆಲಕ್ಕುರುಳಿದೆ. ಆಗ ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?’ ಎಂಬ ವಾಣಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ’? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಎಂದು ನನಗೆ ಹೇಳಿದ ಒಂದು ಶಬ್ದವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನೆಲಕ್ಕೆ ಬಿದ್ದೆನು. ಆಗ ವಾಣಿಯೊಂದು ನನಗೆ, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆ ಪಡಿಸುತ್ತಿರುವೆ?’ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಮಿಯಾ ಜಿಮ್ನಿ ವರ್‍ತಿ ಪಡ್ಲೊ ತನ್ನಾ ಮಾಕಾ ಎಕ್ ಧನ್ ಆಯಿಕ್ಲೊ, ಸಾವ್ಲ್, ಸಾವ್ಲ್! ತಿಯಾ ಕಶ್ಯಾಕ್ ಮಾಕಾ ತರಾಸ್ ದಿತೈಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:7
15 ತಿಳಿವುಗಳ ಹೋಲಿಕೆ  

"ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.


ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು.


ಆದರೆ ಸರ್ವೇಶ್ವರನ ದೂತನು ಆಕಾಶದಿಂದ, "ಅಬ್ರಹಾಮನೇ, ಹೇ ಅಬ್ರಹಾಮನೇ" ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.


ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ಆದರೆ ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು.


“ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


“ಹೀಗೆ ಪ್ರಯಾಣ ಮಾಡುತ್ತಾ ದಮಸ್ಕಸನ್ನು ಸಮೀಪಿಸಿದೆ. ಆಗ ಸುಮಾರು ನಡುಮಧ್ಯಾಹ್ನ. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾಬೆಳಕೊಂದು ನನ್ನ ಸುತ್ತಲೂ ಮಿಂಚಿತು.


ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು