Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:8 - ಕನ್ನಡ ಸತ್ಯವೇದವು C.L. Bible (BSI)

8 ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ ನಾನು - ಕರ್ತನೇ, ನೀನಾರು? ಎಂದು ಕೇಳಲು ಆತನು - ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಾನು, ‘ಪ್ರಭುವೇ, ನೀನು ಯಾರು?’ ಎಂದು ಕೇಳಿದೆನು. ಆ ವಾಣಿಯು, ‘ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ’ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದು ಅವರು ನನಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತನ್ನಾ ಮಿಯಾ, ಧನಿಯಾ, ತಿಯಾ ಕೊನ್? ಮನುನ್ ಇಚಾರ್ಲೊ ತ್ಯಾ ಧನಾನ್, ನಜರೆತಾಚೊ ಜೆಜು ಮಿಯಾ ತಿಯಾ ತರಾಸ್ ದಿತಲ್ಲೆ ಮಾಕಾಚ್ ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:8
16 ತಿಳಿವುಗಳ ಹೋಲಿಕೆ  

“ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.


ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.


ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು.


ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.


ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.


ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.


ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


ನಾನು ನೆಲಕ್ಕುರುಳಿದೆ. ಆಗ ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?’ ಎಂಬ ವಾಣಿ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು