Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:11 - ಕನ್ನಡ ಸತ್ಯವೇದವು C.L. Bible (BSI)

11 ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತ್ಯಾ ದಿಸಿ ರಾತ್ತಿನಿ ಧನಿಯಾ ಜೆಜು ಪಾವ್ಲುಚ್ಯಾ ಜಗ್ಗೊಳ್ ಯೆವ್ನ್ ಇಬೆ ರಾವ್ನ್ ಭಿಂವ್‍ನಕ್ಕೊ! ತಿಯಾ ಮಾಜ್ಯಾ ವಿಶಯಾತ್ ಜೆರುಜಲೆಮಾತ್ ಸಾಂಗಲ್ಲ್ಯಾ ಸಾರ್ಕೆಚ್ ರೊಮಾತ್ ಬಿ ಜಾವ್ನ್ ಮಾಜಿ ಸಾಕ್ಷಿ ಸಾಂಗುಚೆ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:11
27 ತಿಳಿವುಗಳ ಹೋಲಿಕೆ  

ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,


ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.


ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.


ಯೇಸುಕ್ರಿಸ್ತರ ಸಲುವಾಗಿಯೇ ನಾನು ಸೆರೆಯಲ್ಲಿರುವುದೆಂದು ಇಲ್ಲಿಯ ಅರಮನೆಯ ಕಾವಲಾಳುಗಳಿಗೂ ಇತರರೆಲ್ಲರಿಗೂ ಚೆನ್ನಾಗಿ ತಿಳಿದಿದೆ.


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.


ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.


ಸರ್ವೇಶ್ವರ ಇಂತೆನ್ನುತ್ತಾರೆ : “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.


ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು.


ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು.


ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: ‘ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ.


ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II


ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.


ನೀನು ಕಂಡು ಕೇಳಿದ ವಿಷಯಗಳಿಗೆ ನೀನೇ ಎಲ್ಲ ಜನರಿಗೆ ಅವರ ಪರವಾಗಿ ಸಾಕ್ಷಿಯಾಗಬೇಕು.


ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು