Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:19 - ಕನ್ನಡ ಸತ್ಯವೇದವು C.L. Bible (BSI)

19 ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ - ನೀನು ನನಗೆ ಹೇಳಬೇಕಾದದ್ದು ಏನು? ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸೈನಿಕಾಂಚ್ಯಾ ಮುಖಂಡಾನ್ ತ್ಯಾ ದಾಂಡ್ಗ್ಯಾ ಮಾನ್ಸಾಕ್ ಹಾತಿಕ್ ಧರುನ್ ಕೊನ್ ನಸಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆವ್ನ್, ತಿಯಾ ಕಾಯ್ ಸಾಂಗಚೆ ಮನುನ್ ಹಾಸ್ ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:19
12 ತಿಳಿವುಗಳ ಹೋಲಿಕೆ  

ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.


ಆದರೆ ಯೇಸು ಅವನ ಕೈಹಿಡಿದು ಎತ್ತಲು ಅವನು ಎದ್ದುನಿಂತನು.


ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.


ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.


“ಯೆಹೂದ್ಯರು ಶೂಷನ್ ನಗರದಲ್ಲೇ ಐನೂರು ಮಂದಿಯನ್ನು, ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ. ಉಳಿದ ರಾಜಸಂಸ್ಥಾನಗಳಲ್ಲಿ ಇನ್ನೆಷ್ಟುಮಂದಿಯನ್ನು ಹತಮಾಡಿರಬಹುದೋ! ನಿನ್ನ ವಿಜ್ಞಾಪನೆ ಯಾವುದಿದ್ದರೂ ನೆರವೇರಿಸುವೆನು ಕೇಳು, ನೀನು ಏನು ಕೇಳಿದರೂ ಕೊಡುವೆನು ಹೇಳು,” ಎಂದನು.


ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು


ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು.


ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,


ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.


ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ?


ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.


ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು