ಅಪೊಸ್ತಲರ ಕೃತ್ಯಗಳು 23:20 - ಕನ್ನಡ ಸತ್ಯವೇದವು C.L. Bible (BSI)20 ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅವನು - ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ತನ್ನಾ ದಾಂಡ್ಗ್ಯಾ ಮಾನ್ಸಾನ್ ಅನಿ ಲೈ ಪ್ರಶ್ನಿಯಾ ಇಚಾರುಕ್ ಪಾಜೆ ಮನುನ್ ಪಾವ್ಲುಕ್ ಉದ್ದ್ಯಾಚ್ಯಾ ಝಡ್ತಿ ಕರ್‍ತಲ್ಯಾ ಬೈಟಕಿಕ್ ಬಲ್ವುನ್ ಹಾನುಕ್ ತುಜ್ಯಾಕ್ಡೆ ಮಾಗುನ್ ಘೆವ್ಕ್ ಮನುನ್ ನಿರ್ಧಾರ್ ಕರ್ಲಾತ್. ಅಧ್ಯಾಯವನ್ನು ನೋಡಿ |