Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:6 - ಕನ್ನಡ ಸತ್ಯವೇದವು C.L. Bible (BSI)

6 ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ ಒಂದು ಪಾಲು ಫರಿಸಾಯರೂ ಇರುವದನ್ನು ಪೌಲನು ತಿಳಿದು - ಸಹೋದರರೇ, ನಾನು ಫರಿಸಾಯನು, ಫರಿಸಾಯರ ಮಗನು; ಸತ್ತವರೆದ್ದು ಬರುವರು ಎಂಬ ನಿರೀಕ್ಷೆಯ ವಿಷಯವಾಗಿ ನನ್ನನ್ನು ವಿಚಾರಣೆಮಾಡುತ್ತಾರೆ ಎಂದು ಹಿರೀಸಭೆಯಲ್ಲಿ ಕೂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತ್ಯಾ ತಾಂಡ್ಯಾತ್ ಥೊಡಿ ಲೊಕಾ ಸಾದುಸೆವಾಂಚಿ ಅನಿ ಥೊಡಿ ಲೊಕಾ ಫಾರಿಜೆವಾಂಚಿ ಹೊವ್ನ್ ಹೊತ್ತಿ, ತಸೆಹೊವ್ನ್ ಪಾವ್ಲುನ್ ಮಾಜ್ಯಾ ಭಾವಾನು ಮಿಯಾ ಫಾರಿಜೆವಾಂಚೊ! ಅನಿ ಮಾಜೊ ಬಾಬಾಬಿ ಫಾರಿಜೆವಾಂಚೊ ಮರಲ್ಲೆ ಪರ್ತುನ್ ಝಿತ್ತೊ ಹೊತ್ಯಾತ್ ಮನ್ತಲೆ ಮಿಯಾ ವಿಶ್ವಾಸ್ ಕರ್‍ತಲ್ಯಾ ಸಾಟ್ನಿ ಹಿತ್ತೆ ಝಡ್ತಿ ಕರ್‍ತಲ್ಯಾಕ್ಡೆ ಪಾವ್ಲಾ ,ಮನುನ್ ಮೊಟ್ಯಾನ್ ಬೊಬ್ ಮಾರುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:6
17 ತಿಳಿವುಗಳ ಹೋಲಿಕೆ  

‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,


ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.


ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ.


ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.


ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು.


ಆದುದರಿಂದ ನೀವು ನ್ಯಾಸಭೆಯವರೊಂದಿಗೆ ಸೇರಿ ಪೌಲನನ್ನು ನಿಮ್ಮ ಬಳಿಗೆ ಕರೆದುತರಬೇಕೆಂದು ಸಹಸ್ರಾಧಿಪತಿಗೆ ಹೇಳಿಕಳುಹಿಸಿರಿ. ಅವನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿರಿ. ನಾವು ಹೊಂಚುಹಾಕಿಕೊಂಡಿದ್ದು ಅವನು ಇಲ್ಲಿಗೆ ಬರುವ ಮೊದಲೇ ಅವನನ್ನು ಸಂಹರಿಸಿಬಿಡುತ್ತೇವೆ,” ಎಂದರು.


ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.


ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.


ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು