Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:15 - ಕನ್ನಡ ಸತ್ಯವೇದವು C.L. Bible (BSI)

15 ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದಲ್ಲದೆ ನೀತಿವಂತರಿಗೂ ಮತ್ತು ಅನೀತಿವಂತರಿಗೂ ಪುನರುತ್ಥಾನವಾಗುವುದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುವದೆಂದು ಇವರು ದೇವರಲ್ಲಿ ನಿರೀಕ್ಷೆಯಿಟ್ಟಿರುವ ಪ್ರಕಾರವೇ ನಾನೂ ನಿರೀಕ್ಷೆಯುಳ್ಳವನಾಗಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಹ್ಯಾ ಲೊಕಾಕ್ನಿ ದೆವಾಚೆರ್ ಹೊತ್ತೊ ಬರೊಸೊಚ್ ಮಾಕಾಬಿ ಹಾಯ್, ನಿತಿವಂತ್ ಹೊತ್ಯಾಕ್ನಿಬಿ ಅನಿ ನಿತಿವಂತ್ ನ್ಹಯ್ ಅಸಲ್ಲ್ಯಾಕ್ನಿ ಬಿ ಪರ್ತುನ್ ಜಿವ್ ಹೊತಲೆ ಹಾಯ್ ಮನ್ತಲೊಚ್ ತೊ ಬರೊಸೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:15
16 ತಿಳಿವುಗಳ ಹೋಲಿಕೆ  

ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.


ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.


‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.


“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.


ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.


“ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತನಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು