Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:25 - ಕನ್ನಡ ಸತ್ಯವೇದವು C.L. Bible (BSI)

25 ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಪೌಲನು ಸುನೀತಿ ದಯೆ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ - ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಪಾವ್ಲು ಥೈತ್ನಾ ಜಾವ್ನ್ ಖರೆಪಾನಾಚ್ಯಾ ವಿಶಯಾತ್ ಚರ್ಚಾ ಕರುನ್ ಸ್ವನಿಯಂತ್ರನ್ ಅನಿ ಪಿಡೆ ಯೆತಲ್ಲ್ಯಾ ಝಡ್ತಿಚ್ಯಾ ದಿಸಾಚ್ಯಾ ವಿಶಯಾತ್ ಬೊಲ್ತಾನಾ ಫೆಲಿಕ್ಸಾನ್ ಭಿಂವ್ನ್, “ಅತ್ತಾ ತಿಯಾ ಜಾ! ಮಾಕಾ ಅವಕಾಸ್ ಗಾವಲ್ಲ್ಯಾ ತನ್ನಾ ತುಕಾ ಬಲ್ವುತಾ” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:25
99 ತಿಳಿವುಗಳ ಹೋಲಿಕೆ  

ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.


ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.


ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.


ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.


ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.


ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.


ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.


ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.


ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.


ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.”


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.


ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.


ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.


“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.


ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.


ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ : “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.


ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.


ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”


ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!


ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!


ನಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕವನ್ನು ಒಪ್ಪಿಸಬೇಕು.


ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.


ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.


ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.


ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ.


ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.


ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ . ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.


ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.


ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ವಹಿಸಿಹನು ಪ್ರಭು ರಾಜ್ಯಾಧಿಕಾರವನು : ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು : ಕಂಪಿಸುತಿಹುದು ಜಗವು II


ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.


ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.


‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.


ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.


ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು


ಸರ್ವೇಶ್ವರ ನಿಮ್ಮ ಹಾಗು ನಿಮ್ಮ ಪೂರ್ವಜರ ಪರವಾಗಿ ನಡೆಸಿದ ನೀತಿಕಾರ್ಯಗಳನ್ನು ಕುರಿತು ಅವರೆದುರಿನಲ್ಲೇ ನಿಮಗೆ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.


ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.


ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.


ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು