ಅಪೊಸ್ತಲರ ಕೃತ್ಯಗಳು 25:11 - ಕನ್ನಡ ಸತ್ಯವೇದವು C.L. Bible (BSI)11 ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಏನನ್ನಾದರೂ ಮಾಡಿದ್ದೇಯಾದರೆ ಮರಣ ದಂಡನೆಯನ್ನು ನಿರಾಕರಿಸುವುದಿಲ್ಲ. ಆದರೆ ಇವರು ನನ್ನ ಮೇಲೆ ಹೊರಿಸುವ ಅಪವಾದಗಳು ಪೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಾನು ಅನ್ಯಾಯ ಮಾಡಿದವನಾಗಿ ಮರಣದಂಡನೆಗೆ ಕಾರಣವಾದ ಯಾವದನ್ನಾದರೂ ನಡಿಸಿದ್ದಾದರೆ ಮರಣದಂಡನೆಯನ್ನು ಬೇಡವೆನ್ನುವದಿಲ್ಲ. ಇವರು ನನ್ನ ಮೇಲೆ ಹೊರಿಸುವ ತಪ್ಪುಗಳಲ್ಲಿ ಒಂದೂ ನಿಜವಲ್ಲದ ಮೇಲೆ ಇವರ ಮೇಲಣ ದಯೆಯಿಂದ ನನ್ನನ್ನು ಒಪ್ಪಿಸಿಕೊಡುವದಕ್ಕೆ ಒಬ್ಬರಿಗೂ ಅಧಿಕಾರವಿಲ್ಲ. ನಾನು ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಅನಿ ಮಿಯಾ ಚುಕ್ ಕರಲ್ಲೊ ಹೊವ್ನ್ ಖಾಯ್ದ್ಯಾಂಚ್ಯಾ ಪರ್‍ಕಾರ್ ಮಾಕಾ ಮರ್‍ನಾಚಿ ಶಿಕ್ಷಾ ದಿಲ್ಯಾರ್, ಮಿಯಾ ತೆ ಒಪುನ್ ಘೆತಾ, ಖರೆ ಹೆನಿ ಸಾಂಗ್ತಲೆ ಝುಟೆ ಹೊಲ್ಯಾರ್ ಮಾಕಾ ಹೆಂಚ್ಯಾ ಹಾತಿತ್ ಒಪ್ಸುಕ್ ಕೊನಾಕ್ಡೆಬಿ ಹೊಯ್ನಾ! ಮಾಜಿ ಹಿ ವಿಶಯಾ ಸಿಸರಾಚ್ ಸಮಾ ಕರುನ್ದಿತ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.