Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:12 - ಕನ್ನಡ ಸತ್ಯವೇದವು C.L. Bible (BSI)

12 ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ, ಫೆಸ್ತನು ತನ್ನ ಸಭೆಯವರ ಸಂಗಡ ಸಮಾಲೋಚನೆಮಾಡಿದ ಮೇಲೆ ಪೌಲನಿಗೆ; “ನೀನು ಕೈಸರನ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಎಂದೆಯಲ್ಲಾ, ಆದುದರಿಂದ ಕೈಸರನ ಬಳಿಗೇ ಹೋಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಫೆಸ್ತನು ತನ್ನ ಸಭೆಯವರ ಸಂಗಡ ಆಲೋಚನೆಮಾಡಿದ ಮೇಲೆ ಪೌಲನಿಗೆ - ಚಕ್ರವರ್ತಿಯ ಎದುರಿನಲ್ಲಿ ಹೇಳಿಕೊಳ್ಳುತ್ತೇನೆ ಅಂದಿಯಲ್ಲಾ, ಚಕ್ರವರ್ತಿಯ ಬಳಿಗೆ ಹೋಗಬೇಕು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಫೆಸ್ತನು ತನ್ನ ಸಲಹೆಗಾರರೊಂದಿಗೆ ಇದರ ಬಗ್ಗೆ ಮಾತಾಡಿದನು. ಬಳಿಕ ಅವನು, “ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ ಎಂದು ನೀನು ಕೇಳಿಕೊಂಡದ್ದರಿಂದ ನಿನ್ನನ್ನು ಸೀಸರನ ಬಳಿಗೇ ಕಳುಹಿಸಿಕೊಡುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಫೆಸ್ತಾನ್ ಅಪ್ನಾಕ್ ಸಲಹಾ ದಿತಲ್ಯಾಂಚ್ಯಾಕ್ನಾ ಹೆಚ್ಯಾ ವಿಶಯಾತ್ ಬೊಲ್ಲ್ಯಾನ್, ಅನಿ ತಿಯಾ ಮಾಜಿ ವಿಶಯಾತ್ ಸಿಸರಾಚ್ ಸಮಾ ಕರುಂದಿತ್ ಮನುನ್ ಸಾಂಗಲ್ಲ್ಯಾ ಸಾಟ್ನಿ ತುಕಾ ತೆಜ್ಯಾಕ್ಡೆಚ್ ಧಾಡುನ್ ದಿತಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:12
17 ತಿಳಿವುಗಳ ಹೋಲಿಕೆ  

ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


ಅಗ್ರಿಪ್ಪನು ಫೆಸ್ತನಿಗೆ, “ಚಕ್ರವರ್ತಿಗೆ ನೇರವಾಗಿ ಇವನು ಅಪೀಲುಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆಮಾಡಬಹುದಾಗಿತ್ತು,” ಎಂದನು.


ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.


ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.


ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು