Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:13 - ಕನ್ನಡ ಸತ್ಯವೇದವು C.L. Bible (BSI)

13 ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಕೆಲವು ದಿವಸಗಳು ಗತಿಸಿದ ನಂತರ ಅಗ್ರಿಪ್ಪರಾಜನೂ ಬೆರ್ನಿಕೆರಾಣಿಯೂ ಫೆಸ್ತನ ದರ್ಶನಮಾಡಿಕೊಳ್ಳುವದಕ್ಕೆ ಕೈಸರೈಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಥೊಡಿ ದಿಸಾ ಹೊಲ್ಲ್ಯಾ ಮಾನಾ ಅಗ್ರಿಪ್ಪ್ ರಾಜಾ, ಅನಿ ರಾನಿಬೆರ್ನಿಕೆ ಫೆಸ್ತಾಕ್ ನಮಸ್ಕಾರ್ ಕರುಕ್ ಸೆಜೆರೆಯಾಕ್ ಯೆಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:13
12 ತಿಳಿವುಗಳ ಹೋಲಿಕೆ  

ಅಗ್ರಿಪ್ಪನು ಪೌಲನಿಗೆ ಮಾತನಾಡಲು ಅಪ್ಪಣೆಕೊಡುತ್ತಾ, “ಈಗ ನಿನ್ನ ಪರವಾಗಿ ನೀನು ಮಾತನಾಡಬಹುದು,” ಎಂದನು. ಪೌಲನು ಕೈಯೆತ್ತಿ ಹೀಗೆ ವಾದಿಸತೊಡಗಿದನು:


ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.


ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮ ವಿಚಾರಕ್ಕಾಗಿ ದೂತರನ್ನು ಕಳುಹಿಸಿದ್ದನು. ದಣಿಯವರು ಬಂದವರನ್ನು ಚೆನ್ನಾಗಿ ಬೈದು ಕಳಿಸಿದರು.


ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು.


ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.


ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇವೆ,” ಎಂದು ಉತ್ತರಕೊಟ್ಟರು.


ಫೆಸ್ತನು ಅಧಿಕಾರ ವಹಿಸಿಕೊಂಡು ಮೂರು ದಿನಗಳಾದನಂತರ ಸೆಜರೇಯದಿಂದ ಜೆರುಸಲೇಮಿಗೆ ಹೋದನು.


ಫೆಸ್ತನು ಅವರಿಗೆ, “ಪೌಲನು ಸೆಜರೇಯದಲ್ಲಿ ಕೈದಿಯಾಗಿದ್ದಾನೆ. ನಾನು ಬೇಗನೆ ಅಲ್ಲಿಗೆ ಹಿಂದಿರುಗಲಿದ್ದೇನೆ.


ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು