Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:14 - ಕನ್ನಡ ಸತ್ಯವೇದವು C.L. Bible (BSI)

14 ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅವರು ಅನೇಕ ದಿನಗಳು ಅಲ್ಲಿ ತಂಗಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ; “ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅವರು ಅನೇಕ ದಿವಸ ಅಲ್ಲಿ ನಿಂತಿರಲಾಗಿ ಫೆಸ್ತನು ಪೌಲನ ಸಂಗತಿಯನ್ನು ರಾಜನಿಗೆ ತಿಳಿಸಿ ಹೇಳಿದ್ದೇನಂದರೆ - ಫೇಲಿಕ್ಸನು ಬಿಟ್ಟುಹೋದ ಒಬ್ಬ ಸೆರೆಯವನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರು ಅಲ್ಲಿ ಅನೇಕ ದಿನಗಳವರೆಗೆ ಇದ್ದರು. ಫೆಸ್ತನು ಪೌಲನ ವ್ಯಾಜ್ಯದ ಬಗ್ಗೆ ರಾಜನಿಗೆ ಈ ರೀತಿ ತಿಳಿಸಿದನು: “ಫೇಲಿಕ್ಸನು ಸೆರೆಮನೆಯಲ್ಲೇ ಬಿಟ್ಟುಹೋದ ಒಬ್ಬ ವ್ಯಕ್ತಿ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತೆನಿ ಲೈ ದಿಸಾಂಚ್ಯಾ ಪತರ್ ಥೈ ಹೊತ್ತೆ ಫೆಸ್ತಾನ್ ಪಾವ್ಲುಚ್ಯಾ ವಾದಾಚ್ಯಾ ವಿಶಯಾತ್ ರಾಜಾಕ್ ಅಶೆ ಮಟ್ಲ್ಯಾನ್, ಫೆಲಿಕ್ಸಾನ್ ಬಂಧಿಖಾನ್ಯಾಚ್ ಸೊಡುನ್ ಗೆಲ್ಲೊ ಎಕ್ ಮಾನುಸ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:14
3 ತಿಳಿವುಗಳ ಹೋಲಿಕೆ  

ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.


ಕುದುರೆಗಳನ್ನು ಸಜ್ಜುಗೊಳಿಸಿ ಪೌಲನನ್ನು ಏರಿಸಿ, ರಾಜ್ಯಪಾಲ ಫೆಲಿಕ್ಸರ ಬಳಿಗೆ ಭದ್ರವಾಗಿ ಕರೆದುಕೊಂಡು ಹೋಗಿರಿ.”


ಸವಾರರು ಸೆಜರೇಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನ ವಶಕ್ಕೊಪ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು