Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:26 - ಕನ್ನಡ ಸತ್ಯವೇದವು C.L. Bible (BSI)

26 ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಇವನ ವಿಷಯದಲ್ಲಿ ಮಹಾಸನ್ನಿಧಾನಕ್ಕೆ ಬರೆಯುವದಕ್ಕೆ ನಿಶ್ಚಯವಾದದ್ದೇನೂ ಇಲ್ಲ. ಸೆರೆಯವನ ಮೇಲೆ ಆರೋಪಿಸಿರುವ ದೋಷಗಳನ್ನು ಸೂಚಿಸದೆ ಅವನನ್ನು ಕಳುಹಿಸುವದು ಯುಕ್ತವಲ್ಲವೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಆದರೆ ಇವನ ವಿಷಯದಲ್ಲಿ ಸೀಸರನಿಗೆ ಬರೆಯಲು ನಿರ್ದಿಷ್ಟವಾದ ಅಪರಾಧವೇನೂ ನನಗೆ ತೋರುತ್ತಿಲ್ಲ. ಆದ್ದರಿಂದ ನಾನು ಇವನನ್ನು ನಿಮ್ಮೆಲ್ಲರ ಮುಂದೆಯೂ ವಿಶೇಷವಾಗಿ ರಾಜನಾದ ಅಗ್ರಿಪ್ಪನ ಮುಂದೆಯೂ ತಂದಿದ್ದೇನೆ. ಆದ್ದರಿಂದ ನೀವು ಇವನನ್ನು ಪ್ರಶ್ನಿಸಿ ಇವನ ಬಗ್ಗೆ ಸೀಸರನಿಗೆ ಬರೆಯಲು ಏನಾದರೂ ವಿಷಯವುನ್ನು ಕೊಡಬಲ್ಲಿರೆಂದು ನಿರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಖರೆ ಹೆಚ್ಯಾ ವಿಶಯಾತ್ ಸಿಸಾರಾಕ್ ಸಾಂಗುನ್ ಲಿವ್ಕ್ ಮಾಕಾ ಕಾಯ್ಬಿ ಚುಕ್ ದಿಸಿನಾ ಹೊಲಾ ತಸೆ ಹೊವ್ನ್ ಮಿಯಾ ಹೆಕಾ ತುಮ್ಚ್ಯಾ, ಅನಿ ಅಗ್ರಿಪ್ಪ್ ರಾಜಾಚ್ಯಾ ಇದ್ರಾತ್ ಹಾನುನ್ ಇಬೆಕರ್ಲಾ, ತುಮ್ಚ್ಯಾಕ್ನಾ ಸಿಸರಾಕ್ ಚಿಟ್ ಲಿವ್ಕ್ ಕಾಯ್ತರಿಬಿ ವಿಶಯಾತ್ ಹೆಕಾ ವಿಚಾರ್ ಕರ್‍ತಾನಾ ಗಾವ್ತಲಿ ಮನುನ್ ಮಿಯಾ ಆಶ್ಯಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:26
4 ತಿಳಿವುಗಳ ಹೋಲಿಕೆ  

‘ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.


ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.


ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು