Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:1 - ಕನ್ನಡ ಸತ್ಯವೇದವು C.L. Bible (BSI)

1 ಅಗ್ರಿಪ್ಪನು ಪೌಲನಿಗೆ ಮಾತನಾಡಲು ಅಪ್ಪಣೆಕೊಡುತ್ತಾ, “ಈಗ ನಿನ್ನ ಪರವಾಗಿ ನೀನು ಮಾತನಾಡಬಹುದು,” ಎಂದನು. ಪೌಲನು ಕೈಯೆತ್ತಿ ಹೀಗೆ ವಾದಿಸತೊಡಗಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಅಗ್ರಿಪ್ಪನು ಪೌಲನಿಗೆ - ನೀನು ನಿನ್ನ ಪಕ್ಷದಲ್ಲಿ ಮಾತಾಡಬಹುದು ಅನ್ನಲು ಪೌಲನು ಕೈಯೆತ್ತಿ ಪ್ರತಿವಾದ ಮಾಡಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಗ್ರಿಪ್ಪನು ಪೌಲನಿಗೆ, “ಈಗ ನೀನು ನಿನ್ನ ಪರವಾಗಿ ಮಾತಾಡಬಹುದು” ಎಂದು ಹೇಳಿದನು. ಆಗ ಪೌಲನು ತನ್ನ ಕೈಯೆತ್ತಿ ಮಾತಾಡಲಾರಂಭಿಸಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಗ್ರಿಪ್ಪ್ ರಾಜಾನ್ ಪಾವ್ಲುಕ್, ಅತ್ತಾ ತಿಯಾ ತುಜ್ಯಾ ವೈನಾ ಬೊಲುಕ್ ಹೊತಾ ಮನುನ್ ಸಾಂಗ್ಲ್ಯಾನ್, ತನ್ನಾ ಪಾವ್ಲುನ್ ಅಪ್ನಾಚೆ ಹಾತ್ ಉಕ್ಲುನ್ ಅಸೊ ಬೊಲುಕ್‍ ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:1
12 ತಿಳಿವುಗಳ ಹೋಲಿಕೆ  

ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.


“ಅಗ್ರಿಪ್ಪ ರಾಜರೇ, ಯೆಹೂದ್ಯರು ನನ್ನ ಮೇಲೆ ಹೊರಿಸಿರುವ ಎಲ್ಲಾ ಆಪಾದನೆಗಳಿಗೆ ಇಂದು ತಮ್ಮ ಮುಂದೆ ಪ್ರತಿವಾದಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವೆಂದೇ ಎಣಿಸುತ್ತೇನೆ.


ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.


ನಾನು ನಿಮ್ಮನ್ನು ಕರೆದಾಗ ತಿರಸ್ಕರಿಸಿದಿರಿ. ನಾನು ನಿಮಗೆ ಕೈ ನೀಡಿದಾಗ ಗಮನಿಸದೆ ಹೋದಿರಿ.


ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.


ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು ; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.


“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”


ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ.


ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.


“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.


ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II


ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು