Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:10 - ಕನ್ನಡ ಸತ್ಯವೇದವು C.L. Bible (BSI)

10 ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ . ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆರೂಸಲೇವಿುನಲ್ಲಿ ಹಾಗೆಯೇ ನಡಿಸಿದೆನು. ಮಹಾಯಾಜಕರಿಂದ ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇಡಿಸಿ ಅವರಿಗೆ ಮರಣದ ತೀರ್ಪಾದಾಗ ನನ್ನ ಸಮ್ಮತಿಯನ್ನು ಸೂಚಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಜೆರುಜಲೆಮಾತ್ ದೆವಾಚ್ಯಾ ಲೊಕಾಕ್ನಿ ವಿರೊಧ್ ಹೊವ್ನ್ ಲೈ ಕಾಮಾ ಕರಲ್ಲೊ ಹ್ಯಾ ದೆವಾಚ್ಯಾ ಲೊಕಾಕ್ನಿ ಬಂದಿಖಾನ್ಯಾತ್ ಘಾಲುಕ್ ಮುಖ್ಯ್ ಯಾಜಕಾನಿ ಮಾಕಾ ಅಧಿಕಾರ್ ದಿಲ್ಯಾನಿ, ಜೆಜುಚ್ಯಾ ಸಿಸಾಕ್ನಿ ಜಿವಾನಿ ಮಾರಲ್ಲ್ಯಾ ತನ್ನಾ ಮಿಯಾ ತೆಕಾ ಒಪ್ಗಿ ದಿಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:10
17 ತಿಳಿವುಗಳ ಹೋಲಿಕೆ  

ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.


ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.


ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.


ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.


ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.


ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.


ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.


ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.


ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು.


ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು