Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:16 - ಕನ್ನಡ ಸತ್ಯವೇದವು C.L. Bible (BSI)

16 ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಎದ್ದು, ನಿಂತುಕೋ. ನಿನ್ನನ್ನು ನನ್ನ ಸೇವಕನಾಗಿಯೂ, ಸಾಕ್ಷಿಯಾಗಿಯೂ ನೇಮಿಸುವುದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ಈಗಲೂ, ಮುಂದೆಯೂ ನಿನಗೆ ತೋರಿಸಲಿರುವ ದರ್ಶನಗಳಲ್ಲಿಯೂ, ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ನನ್ನ ಸಾಕ್ಷಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನನ್ನು ನನ್ನ ಸೇವಕನಾಗಿಯೂ ಸಾಕ್ಷಿಯಾಗಿಯೂ ನೇವಿುಸುವದಕ್ಕೋಸ್ಕರ ನಿನಗೆ ಕಾಣಿಸಿಕೊಂಡಿದ್ದೇನೆ. ನಾನು ಈಗಲೂ ಮುಂದೆ ನಿನಗೆ ಕೊಡಲಿಕ್ಕಿರುವ ದರ್ಶನಗಳಲ್ಲಿಯೂ ನಿನಗೆ ಕಾಣಿಸಿಕೊಂಡದ್ದನ್ನು ಕುರಿತು ನೀನು ಸಾಕ್ಷಿಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎದ್ದೇಳು! ನಿನ್ನನ್ನು ನನ್ನ ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ಆರಿಸಿಕೊಂಡಿದ್ದೇನೆ. ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡದ್ದರ ವಿಷಯವಾಗಿಯೂ ನಾನು ನಿನಗೆ ಕೊಡಲಿರುವ ದರ್ಶನಗಳ ವಿಷಯವಾಗಿಯೂ ನೀನು ಜನರಿಗೆ ಸಾಕ್ಷಿಯಾಗಿರುವೆ. ಇದಕ್ಕಾಗಿಯೇ ಈ ಹೊತ್ತು ನಾನು ನಿನಗೆ ಕಾಣಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಉಟುನ್ ಇಬೆ ರ್‍ಹಾ! ತುಕಾ ಮಾಜೊ ಸೆವಕ್ ಹೊವ್ನ್ ಸಾಕ್ಷಿ ಎಚುನ್ ಘೆವ್ಕ್ ಸಾಟ್ನಿ ಅತ್ತಾ ಮಿಯಾ ತುಕಾ ದಾಕ್ವುನ್ ಘೆಟಲ್ಯಾ ವಿಶಯಾತ್ ಸಾಕ್ಷಿ ಹೊವ್ನ್ ರ್‍ಹಾತೆಯ್ ಹೆಕಾಚ್ ಮನುನ್ ಅತ್ತಾ ಮಿಯಾ ತುಕಾ ದಾಕ್ವುನ್ ಘೆಟ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:16
34 ತಿಳಿವುಗಳ ಹೋಲಿಕೆ  

ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.


ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.


ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.


ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.


ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.


ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.


ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.


ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.


ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ.


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.


ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು.


ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.


‘ಪ್ರಭೂ ನೀವಾರು?’ ಎಂದು ನಾನು ಕೇಳಿದೆ. ಅದಕ್ಕೆ ಪ್ರಭು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು