Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:26 - ಕನ್ನಡ ಸತ್ಯವೇದವು C.L. Bible (BSI)

26 ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅಗ್ರಿಪ್ಪರಾಜನು ಈ ಸಂಗತಿಗಳನ್ನೆಲ್ಲಾ ತಿಳಿದವನು; ಆದುದರಿಂದ, ಅವನ ಮುಂದೆ ಧೈರ್ಯವಾಗಿ ಮಾತನಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ, ಏಕೆಂದರೆ ಇದು ಒಂದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅಗ್ರಿಪ್ಪರಾಜನು ಈ ಸಂಗತಿಗಳನ್ನು ತಿಳಿದವನು; ಅವನ ಮುಂದೆ ಧೈರ್ಯವಾಗಿ ಮಾತಾಡುತ್ತೇನೆ. ಇವುಗಳಲ್ಲಿ ಒಂದಾದರೂ ಅವನಿಗೆ ಮರೆಯಾದದ್ದಲ್ಲವೆಂದು ನಂಬಿದ್ದೇನೆ, ಯಾಕಂದರೆ ಇದು ಮೂಲೆಯಲ್ಲಿ ನಡೆದ ಕಾರ್ಯವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ರಾಜನಾದ ಅಗ್ರಿಪ್ಪನಿಗೆ ಈ ಸಂಗತಿಗಳು ತಿಳಿದಿವೆ. ನಾನು ಅವನೊಂದಿಗೆ ಸ್ವತಂತ್ರವಾಗಿ ಮಾತಾಡಬಲ್ಲೆನು. ಈ ಎಲ್ಲಾ ಸಂಗತಿಗಳ ಬಗ್ಗೆ ಅವನು ಕೇಳಿದ್ದಾನೆಂದು ನನಗೆ ಗೊತ್ತಿದೆ. ಯಾಕೆಂದರೆ ಎಲ್ಲಾ ಜನರು ನೋಡಬಹುದಾದ ಸ್ಥಳದಲ್ಲಿ ಈ ಸಂಗತಿಗಳು ನೆರವೇರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ರಾಜಾ ಹೊಲ್ಲ್ಯಾ ಅಗ್ರಿಪ್ಪಾಕ್ ಹಿ ಸಂಗ್ತಿಯಾ ಕಳ್ಳಾತ್ ಮಿಯಾ ತೆಚ್ಯಾ ವಾಂಗ್ಡಾ ಸ್ವತಂತ್ರ್ ಹೊವ್ನ್ ಬೊಲುಕ್ ಹೊತಾ ಹಿ ಸಗ್ಳಿ ಸಂಗ್ತಿಯಾಚ್ಯಾ ಬಗ್ಗೆ ತೆನಿ ಆಯ್ಕ್ಲಾ ಮನುನ್ ಮಾಕಾ ಗೊತ್ತ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ಸಗ್ಳಿ ಲೊಕಾ ಬಗ್ತಲ್ಯಾ ಜಾಗ್ಯಾರ್ ಹಿ ಸಂಗ್ತಿಯಾ ಹೊಲ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:26
9 ತಿಳಿವುಗಳ ಹೋಲಿಕೆ  

ಆಗ ಅಗ್ರಿಪ್ಪನು ಫೆಸ್ತನಿಗೆ, “ಆ ಮನುಷ್ಯ ಹೇಳುವುದನ್ನು ನಾನು ಖುದ್ದಾಗಿ ಕೇಳಲಾಶಿಸುತ್ತೇನೆ,” ಎಂದನು. “ನಾಳೆಯೇ ಅದಕ್ಕೆ ವ್ಯವಸ್ಥೆ ಮಾಡುತ್ತೇನೆ,” ಎಂದು ಉತ್ತರವಿತ್ತನು ಫೆಸ್ತ.


ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.


ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.


ಅಗ್ರಿಪ್ಪ ರಾಜರೇ, ತಮಗೆ ಪ್ರವಾದಿಗಳಲ್ಲಿ ನಂಬಿಕೆಯುಂಟೋ? ಉಂಟೆಂದು ನಾನು ಬಲ್ಲೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು