Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:4 - ಕನ್ನಡ ಸತ್ಯವೇದವು C.L. Bible (BSI)

4 ನಾನು ಚಿಕ್ಕಂದಿನಿಂದ ಯಾವ ರೀತಿ ಜೆರುಸಲೇಮಿನಲ್ಲಿಯೇ ನನ್ನ ದೇಶೀಯರೊಡನೆ ಜೀವಿಸಿದೆಯೆಂಬುದು ಎಲ್ಲ ಯೆಹೂದ್ಯರಿಗೆ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ನಾನು ಚಿಕ್ಕಂದಿನಿಂದಲೂ, ಯೆರೂಸಲೇಮಿನಲ್ಲಿ ನನ್ನ ದೇಶದ ಜನರೊಳಗಿದ್ದು, ಬದುಕಿದ ರೀತಿಯು ಎಲ್ಲಾ ಯೆಹೂದ್ಯರಿಗೆ ತಿಳಿದ ವಿಷಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಮೊದಲಿಂದಲೂ ಯೆರೂಸಲೇವಿುನಲ್ಲಿ ನನ್ನ ದೇಶದ ಜನರೊಳಗಿದ್ದುಕೊಂಡು ಬಾಲ್ಯದಿಂದ ಬದುಕಿದ ಬಗೆಯು ಎಲ್ಲಾ ಯೆಹೂದ್ಯರಿಗೆ ತಿಳಿದೇ ಅದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನನ್ನ ಇಡೀ ಜೀವಮಾನದ ಬಗ್ಗೆ ಎಲ್ಲಾ ಯೆಹೂದ್ಯರಿಗೆ ಗೊತ್ತಿದೆ. ನಾನು ಆರಂಭದಿಂದ ನನ್ನ ಸ್ವದೇಶದಲ್ಲಿಯೂ ಅನಂತರ ಜೆರುಸಲೇಮಿನಲ್ಲಿಯೂ ಜೀವಿಸಿದ ರೀತಿಯನ್ನು ಅವರು ಬಲ್ಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ನಾನು ಬಾಲಕನಾಗಿದ್ದಾಗಿನಿಂದ, ನನ್ನ ಪಟ್ಟಣದಲ್ಲಿಯೂ ಅನಂತರ ಯೆರೂಸಲೇಮಿನಲ್ಲಿಯೂ ನಾನು ಜೀವನ ಮಾಡಿದ ರೀತಿಯನ್ನು ಯೆಹೂದ್ಯರೆಲ್ಲರೂ ಬಲ್ಲವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಿಯಾ ಬಾರಿಕ್ ರಾತಾನಾಸ್ನಾಚ್ ಜೆರುಜಲೆಮಾತ್ ಮಾಜ್ಯಾ ಸ್ವತಾಚ್ಯಾ ಲೊಕಾಂಚ್ಯಾ ವಾಂಗ್ಡಾ ಜಿವನ್ ಕರಲ್ಲೆ ಸಗ್ಳ್ಯಾ ಜುದೆವಾಂಚ್ಯಾ ಲೊಕಾಕ್ನಿಬಿ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:4
5 ತಿಳಿವುಗಳ ಹೋಲಿಕೆ  

ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.


ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.


ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,


“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.


ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು