Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:7 - ಕನ್ನಡ ಸತ್ಯವೇದವು C.L. Bible (BSI)

7 ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಆರಾಧಿಸುತ್ತಾ, ಆ ವಾಗ್ದಾನದ ಫಲವನ್ನು ಹೊಂದುವುದಕ್ಕಾಗಿ ನಿರೀಕ್ಷಿಸುತ್ತಾ ಇದ್ದಾರೆ. ಅರಸನೇ, ಅದೇ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು, ನನ್ನ ವಿರುದ್ಧ ದೋಷಾರೋಪಣೆಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈ ವಾಗ್ದಾನವು ಖಂಡಿತವಾಗಿ ನೆರವೇರುತ್ತದೆ ಎಂದು ಹನ್ನೆರಡು ಕುಲಗಳ ನಮ್ಮ ಜನರು ನಿರೀಕ್ಷಿಸಿಕೊಂಡಿದ್ದಾರೆ. ಯೆಹೂದ್ಯರು ಹಗಲಿರುಳು ದೇವರ ಸೇವೆ ಮಾಡುತ್ತಿರುವುದು ಈ ನಿರೀಕ್ಷೆಯಿಂದಲೇ. ನಾನು ಸಹ ಇದೇ ನಿರೀಕ್ಷೆಯನ್ನು ಹೊಂದಿರುವುದರಿಂದ ಇವರು ನನ್ನ ಮೇಲೆ ಆಪಾದನೆಗಳನ್ನು ಹೊರಿಸಿದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹಿ ಗೊಸ್ಟಿಯಾ ಖರೆಚ್ ಖರಿ ಹೊತ್ಯಾತ್ ಮನುನ್ ಬಾರಾ ಕುಳಿಚ್ಯಾ ಅಮ್ಚ್ಯಿ ಲೊಕಾ ಬರೊಸೊ ಥವ್ನ್ ಹಾತ್, ಜುದೆವಾಂಚಿ ಲೊಕಾ ದಿಸ್ ರಾತ್ ದೆವಾಚಿ ಸೆವಾ ಕರ್‍ತಲೆ ಹ್ಯೊ ಬರೊಸೊ ಘೆವ್ನ್ ಹಾಯ್ ಮನುನ್ ಹೆನಿ ಮಾಜ್ಯಾ ವರ್‍ತಿ ಅಪ್ವಾದಾ ಸಗ್ಳ್ಯಿ ಘಾಟ್ಲಾತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:7
19 ತಿಳಿವುಗಳ ಹೋಲಿಕೆ  

ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ಹೀಗೆ ನಾನೂ ಸಹ ಮೃತ್ಯುಂಜಯನಾಗುತ್ತೇನೆ ಎಂಬುದೇ ನನ್ನ ನಂಬಿಕೆ-ನಿರೀಕ್ಷೆ.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.


“ಅಗ್ರಿಪ್ಪ ರಾಜರೇ, ಯೆಹೂದ್ಯರು ನನ್ನ ಮೇಲೆ ಹೊರಿಸಿರುವ ಎಲ್ಲಾ ಆಪಾದನೆಗಳಿಗೆ ಇಂದು ತಮ್ಮ ಮುಂದೆ ಪ್ರತಿವಾದಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವೆಂದೇ ಎಣಿಸುತ್ತೇನೆ.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಕೀರ್ತಿಸಿರಿ ಪ್ರಭುವನು ಆತನ ಮಂದಿರದಲ್ಲಿರುವವರೇ I ನಮ್ಮ ದೇವಾಲಯದ ಪ್ರಾಕಾರದಲ್ಲಿಹ ಸೇವಕರೇ II


ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.


ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.


ಏಕೆಂದರೆ, ತಾವು ಯೆಹೂದ್ಯರ ಆಚಾರವಿಚಾರಗಳನ್ನೂ ವಾದವಿವಾದಗಳನ್ನೂ ಚೆನ್ನಾಗಿ ಬಲ್ಲಿರಿ. ಆದುದರಿಂದ ನನ್ನ ಮಾತನ್ನು ತಾಳ್ಮೆಯಿಂದ ಆಲಿಸಬೇಕೆಂದು ವಿನಂತಿಸುತ್ತೇನೆ:


ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು