Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:1 - ಕನ್ನಡ ಸತ್ಯವೇದವು C.L. Bible (BSI)

1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮಿ ಇಟಲಿಕ್ ಢೊನಿತ್ನಾ ಜಾವ್ಚೆ ಮನುನ್ ನಿರ್ದಾರ್ ಕರ್ಲಾಂವ್ ಪಾವ್ಲುಕ್‍ ಅನಿ ಹುರಲ್ಯಾ ಚೊರಾಕ್ನಿ ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನ್ಯ ರೊಮಾಚೊ ಶತಾದಿಪತಿ ರಾಕ್ವಲಿ ಹೊವ್ನ್ ಹೊತ್ತೊ, ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನಿಕಾತ್ನಿ ಸೆವಾ ಕರಿತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:1
29 ತಿಳಿವುಗಳ ಹೋಲಿಕೆ  

ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.


ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು.


ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.


ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.


ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.


ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,


ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು.


ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಇದನ್ನು ಕೇಳಿದ್ದೇ, ಶತಾಧಿಪತಿಯು ಸೈನ್ಯಾಧಿಪತಿಯ ಬಳಿಗೆ ಬಂದು, “ನೀವು ಮಾಡಿಸುತ್ತಿರುವುದಾದರೂ ಏನು? ಆ ಮನುಷ್ಯ ರೋಮಿನ ಪೌರನು,” ಎಂದು ತಿಳಿಸಿದನು.


ಆ ಕ್ಷಣವೇ, ಅವನು ಕೆಲವು ಶತಾಧಿಪತಿಗಳನ್ನೂ ಸೈನಿಕರನ್ನೂ ಕರೆದುಕೊಂಡು ಜನಸಮೂಹವಿದ್ದ ಕಡೆ ಧಾವಿಸಿದನು. ಸೈನಿಕರೊಡನೆ ಬರುತ್ತಿರುವ ಸೈನ್ಯಾಧಿಪತಿಯನ್ನು ಕಂಡು ಜನರು ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.


ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು.


ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.


ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.


ಯೌವನದಿಂದಲೆ ನೊಗ ಹೊತ್ತರೆ ಮಾನವನಿಗೆ ಅದು ಹಿತಕರ.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.


ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ತಿಳಿದು ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು