ಅಪೊಸ್ತಲರ ಕೃತ್ಯಗಳು 27:23 - ಕನ್ನಡ ಸತ್ಯವೇದವು C.L. Bible (BSI)23 ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಕಳದಲ್ಲ್ಯಾ ರಾತ್ತಿನ್ ದೆವಾಕ್ನಾ ಎಕ್ ದುತ್ ಮಾಜ್ಯಾ ಬಾಜುಕ್ ಯೆವ್ನ್ ಇಬೆ ಹೊತ್ತೊ ಮಿಯಾ ಆರಾದನ್ ಕರ್ತಲೆ ತ್ಯಾಚ್ ದೆವಾಕ್ ಅನಿ ಮಿಯಾ ತೆಜೊಚ್. ಅಧ್ಯಾಯವನ್ನು ನೋಡಿ |
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.